ನವದೆಹಲಿ: ಜೀವನೋಪಾಯಕ್ಕಾಗಿ ಮನೆಮನೆಗೆ ದಿನಪತ್ರಿಕೆಗಳನ್ನು ಹಾಕುತ್ತಿದ್ದ ಹುಡುಗನೊಬ್ಬ ಈಗ ದೇಶದ ಅತ್ಯುನ್ನತ ಕ್ರೀಡಾ ಗೌರವವಾದ ಖೇಲ್‍ರತ್ನ ಪ್ರಶಸ್ತಿಗೆ ಪಾತ್ರನಾಗಿದ್ದಾನೆ. ಆ ಹುಡುಗನೇ ಪ್ಯಾರಾಲಿಂಪಿಕ್ ಗೇಮ್ಸ್ ಸ್ವರ್ಣ ಪದಕ ವಿಜೇತ ಹೈಜಂಪ್ ಪಟು ಮರಿಯಪ್ಪನ್ ತಂಗವೇಲು.
ತಮಿಳುನಾಡಿನ 25 ವರ್ಷದ ಮರಿಯಪ್ಪನ್ ತಂಗವೇಲು 2016ರ ರಿಯೋ ಪ್ಯಾರಾಲಿಂಪಿಕ್‍ನಲ್ಲಿ ಪುರುಷರ ಹೈಜಂಪ್ ವಿಭಾಗದಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು. ಈ ವರ್ಷ ಖೇಲ್‍ರತ್ನ ಪ್ರಶಸ್ತಿಗೆ ಭಾಜನರಾಗಿರುವ ಐವರು ಕ್ರೀಡಾಪಟುಗಳಲ್ಲಿ ಅವರೂ ಒಬ್ಬರಾಗಿದ್ದಾರೆ. ಶನಿವಾರ ನಡೆಯಲಿರುವ ವರ್ಚುವಲ್ ಕ್ರೀಡಾ ಪ್ರಶಸ್ತಿ ಸಮಾರಂಭದಲ್ಲಿ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಂದ ಈ ಗೌರವ ಸ್ವೀಕರಿಸಲಿದ್ದಾರೆ.
More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ