July 6, 2022

Newsnap Kannada

The World at your finger tips!

WhatsApp Image 2022 06 08 at 9.40.58 AM

parents killed daughter for loving other caste guy

ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ಪೋಷಕರು – ಮರ್ಯಾದ ಹತ್ಯೆ

Spread the love

ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಅಪ್ರಾಪ್ತ ಮಗಳನ್ನು ತಂದೆ ಮತ್ತು ತಾಯಿ ಇಬ್ಬರು ಸೇರಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.

ಇದನ್ನು ಓದಿ –ಮುತಾಲಿಕ್‌, ಯಶ್‌ ಪಾಲ್‌ ತಲೆ ತೆಗೆದರೆ 20 ಲಕ್ಷ ರು – ಸಾಮಾಜಿಕ ಜಾಲತಾಣದಲ್ಲಿ ಓಪನ್‌ ಅಫರ್

ಎರಡನೇ ಪಿಯು ವಿದ್ಯಾರ್ಥಿನಿ ಶಾಲಿನಿ (17) ಕೊಲೆಗೀಡಾದ ಅಪ್ರಾಪ್ತೆ.

ಇದೊಂದು ಮರ್ಯಾದ ಹತ್ಯೆಯಾಗಿದೆ. ಮಗಳನ್ನು ಕೊಂದ ಆರೋಪದ ಮೇಲೆ ತಂದೆ ಸುರೇಶ್ ಹಾಗೂ ತಾಯಿ ಬೇಬಿಯನ್ನು ಬಂಧಿಸಿದ್ದಾರೆ.

ಕೊಲೆಗೀಡಾದ ಅಪ್ರಾಪ್ತೆಯು ಪಕ್ಕದ ಗ್ರಾಮದ ಮೆಲ್ಲಹಳ್ಳಿಯ ಯುವಕ ಮಂಜು ಎಂಬಾತನನ್ನು ಪ್ರೀತಿಸುತ್ತಿದ್ದಳು. ಇವರಿಬ್ಬರ ಪ್ರೀತಿಗೆ ಶಾಲಿನಿ ಪೋಷಕರು ವಿರೋಧಿಸಿದ್ದರು.

ಪ್ರೇಮಿಗಳು ಮದುವೆಯಾಗಲು ನಿರ್ಧರಿಸಿದ್ದರು. ಪ್ರಿಯಕರನಿಗಾಗಿ ಶಾಲಿನಿ ಮನೆ ಬಿಟ್ಟಿದ್ದಳು. ಇದೇ ವಿಚಾರ ಪೊಲೀಸ್ ಠಾಣೆ ಮೆಟ್ಟಲೇರಿತ್ತು. ಪೊಲೀಸರ ಮುಂದೆ ಶಾಲಿನಿ ಮನೆಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು. ಹೀಗಾಗಿ ಶಾಲಿನಿ ಬಾಲಮಂದಿರಕ್ಕೆ ಸೇರಿಕೊಂಡಿದ್ದಳು.

ಇತ್ತೀಚೆಗಷ್ಟೆ ಉಪಾಯ ಮಾಡಿ ಮಗಳನ್ನು ಸುರೇಶ್ ಹಾಗೂ ಬೇಬಿ ಮನೆಗೆ ಕರೆ ತಂದು ಮಗಳನ್ನು ಕೊಲೆ ಮಾಡಿದ್ದಾರೆ. ಶಾಲಿನಿ ಮೃತದೇಹ ಜಮೀನೊಂದರಲ್ಲಿ ಪತ್ತೆಯಾಗಿದೆ. ತಮಗೆ ಅವಮಾನ ಮಾಡಿದಕ್ಕೆ ಮಗಳನ್ನು ಕೊಲೆ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!