ಸ್ವಾಭಿಮಾನಿ ಎಂದು ಹೇಳಿಕೊಂಡೇ ಅಧಿಕಾರಕ್ಕೆ ಬಂದ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿಗೆ ಬೆಂಬಲ ಅಂತ ಹೇಳಿದ್ದರೂ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡದೆ ಋಣ ಸಂದಾಯ ಕಾರಣ ಕೊಟ್ಟು ಮೇಲುಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಕೈ ಕೊಟ್ಟು , ರೈತ ಸಂಘದ ಅಭ್ಯರ್ಥಿ ದರ್ಶನ್ ಗೆ ಜೈ ಎಂದಿದ್ದಾರೆ.
ಮೇಲುಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬದಲು ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣಯ್ಯಗೆ ಸುಮಲತಾ ಬೆಂಬಲ ಘೋಷಣೆ ಮಾಡಿದ್ದಾರೆ.
ಸುಮಲತಾ ಬೆಂಬಲದ ನಿರೀಕ್ಷೆಯಲ್ಲಿದ್ದ ಬಿಜೆಪಿ ಅಭ್ಯರ್ಥಿ ಡಾ. ಇಂದ್ರೇಶ್ ಶಾಕ್ ಆಗಿದೆ.
ಬಿಜೆಪಿ ಅಭ್ಯರ್ಥಿ ಡಾ.ಇಂದ್ರೇಶ್ಗೆ ಕೊನೆಯ ಕ್ಷಣದಲ್ಲಿ ಸುಮಲತಾ ಅವರು ಕೈ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರಿಗೆ ಬಿಜೆಪಿ ಹಾಗೂ ರೈತ ಸಂಘ ಬಹಿರಂಗವಾಗಿ ಬೆಂಬಲ ನೀಡಿತ್ತು. ಹಿಂಬಾಗಿಲಿನಿಂದ ಸುಮಲತಾ ಗೆಲುವಿಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರು ಸಹ ಶ್ರಮಿಸಿದ್ದರು.
ಬಿಜೆಪಿಗೆ ತಿರುಗು ಬಾಣ
ಇತ್ತೀಚೆಗೆ ಸುಮಲತಾ ಅವರು ಬಿಜೆಪಿಗೆ ನನ್ನ ಸಂಪೂರ್ಣ ಬೆಂಬಲ ಎಂದು ಘೋಷಿಸಿದ್ದರು. ಜಿಲ್ಲೆಯ ಏಳು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತೆ ಎಂದು ಎಲ್ಲಾ ಕಡೆ ಹೇಳಿಕೊಂಡು ಬರುತ್ತಿದ್ದರು. ಆದರೆ ಈಗ ಬಿಜೆಪಿಗೆ ತಿರುಗು ಬಾಣ ಹೊಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಕಣದಲ್ಲಿದ್ದರೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ನೀಡಿ ಎಂದು ಹೇಳುತ್ತಿದ್ದಾರೆ.
ಸುಮಲತಾರ ಈ ನಿರ್ಧಾರದ ವಿರುದ್ಧ ಮೇಲುಕೋಟೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಲ್ಲಿ ಆಕ್ರೋಶ
ವ್ಯಕ್ತವಾಗಿದೆ. ಸುಮಲತಾಗೆ ನಾವು ಬೆಂಬಲ ಕೊಟ್ಟಿರಲಿಲ್ವಾ ಎಂದು ಬಿಜೆಪಿ ಕಾರ್ಯಕರ್ತರು ಪ್ರಶ್ನೆ ಮಾಡುತ್ತಿದ್ದಾರೆ.