ರಾಮನಗರ: ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕುರುಬಳ್ಳಿದೊಡ್ಡಿ ಗ್ರಾಮದಲ್ಲಿ, ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿದ್ದ ರೌಡಿಶೀಟರ್‌ಗಳನ್ನು ಪ್ರಶ್ನಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಆರೋಪಿಗಳು ಅರಣ್ಯ ಪ್ರದೇಶದಲ್ಲಿ ಕುಳಿತು ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಅವರನ್ನು ಪ್ರಶ್ನಿಸಿದಾಗ ಗಲಾಟೆ ನಡೆಸಿ, ವಾಹನಕ್ಕೆ ಬೆಂಕಿ ಹಚ್ಚಲು ಪ್ರಯತ್ನಿಸಿದರು.
ಪೋಲೀಸರ ಮೇಲೂ ಹಲ್ಲೆ, ಟ್ಯಾಬ್ ನಾಶ
ಅರಣ್ಯ ಇಲಾಖೆಯ ಸಿಬ್ಬಂದಿ ತಕ್ಷಣ 112 ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ, ಸ್ಥಳಕ್ಕೆ ಆಗಮಿಸಿದ ಸಾತನೂರು ಠಾಣೆಯ ಪೊಲೀಸರ ಮೇಲೆ ಸಹ ಆರೋಪಿಗಳು ಹಲ್ಲೆ ನಡೆಸಿದರು. ಹಲ್ಲೆ ವೇಳೆ ಆರೋಪಿಗಳು ಪೊಲೀಸರ ಟ್ಯಾಬ್ ಕೂಡ ಹೊಡೆದು ಹಾಕಿದ್ದಾರೆ.
ಮೂರು ಮಂದಿ ಬಂಧನ, ಇನ್ನಿಬ್ಬರಿಗಾಗಿ ಶೋಧ
ರೌಡಿಶೀಟರ್‌ಗಳಾದ ಕಿರಣ್, ಸುಂದರ್ ಮತ್ತು ಪ್ರತಾಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.ಇದನ್ನು ಓದಿ –ಚಿನ್ನ ಕಳ್ಳಸಾಗಣೆ ಪ್ರಕರಣ – ಬೆಂಗಳೂರು ವಿಮಾನ ನಿಲ್ದಾಣದಲ್ಲಿ IPS ಅಧಿಕಾರಿ ಸಂಬಂಧಿ ವಶಕ್ಕೆ
ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು