ಭಾರತದ ಸ್ವಾತಂತ್ರ್ಯೋತ್ಸವ ಆಚರಿಸುವ ಆಗಸ್ಟ್ ತಿಂಗಳ ಮೊದಲ ದಿನ ಪ್ರವೇಶಿಸುತ್ತಿರುವ ಸಮಯದಲ್ಲಿ…….
ಉಕ್ಕಿ ಹರಿಯುವ ದೇಶಪ್ರೇಮ………..
ಎಲ್ಲೆಲ್ಲೂ ರಾಷ್ಟ್ರಗೀತೆ – ರಾಷ್ಟ್ರಧ್ವಜ…….
ಜೈ ಭಾರತ್ ಘೋಷಣೆ……
ತುಂಬಾ ಸಂತೋಷ……
ಆದರೆ,
ಸೂಕ್ಷ್ಮವಾಗಿ ಗಮನಿಸಿ ಮತ್ತು ನೆನಪಿಡಿ………
ಇದೇ ಬಾಯಿಗಳೇ ದ್ವೇಷ ಕಾರುವ ರಕ್ತ ಹೀರುವ ಘೋಷಣೆ ಕೂಗುವುದು…..
ಇದೇ ಕಣ್ಣುಗಳೇ ಸಾವುಗಳನ್ನು ಸಂಭ್ರಮಿಸಿ ಕ್ರೂರತೆ ಮೆರೆಯುವುದು….
ಇದೇ ಕೈಗಳೇ ಭ್ರಷ್ಟ ಲಂಚದ ಹಣಕ್ಕೆ ಕೈಚಾಚುವುದು…..
ಇದೇ ಕಾಲುಗಳೇ ಹಣ ಹೆಂಡ ಪಡೆದು ಮತದಾನ ಕೇಂದ್ರಕ್ಕೆ ಸಾಗುವುದು….
ಇದೇ ತೋಳುಗಳೇ ಅತ್ಯಾಚಾರಕ್ಕೆ ಬಳಸಲ್ಪಡುವುದು….
ಇದೇ ಮನಸ್ಸುಗಳೇ ಇಂದು ದೇಶದಲ್ಲಿ ಅರಾಜಕತೆ ಅಸಹಿಷ್ಣತೆ ಉಂಟುಮಾಡುತ್ತಿರುವುದು………..
ಜನರನ್ನು ಟೀಕಿಸಿದ್ದಕ್ಕೆ ಬೇಸರವಾಗುತ್ತಿದೆಯೇ ?
ಬನ್ನಿ ನನ್ನೊಂದಿಗೆ…..
ಇಡೀ ದೇಶದ ಸರ್ಕಾರಿ ಕಚೇರಿಗಳಲ್ಲಿ, ಆಸ್ಪತ್ರೆಯಿಂದ ವಿಧಾನಸಭೆಗಳವರೆಗೆ,
ಜಮೀನು ನೋಂದಣಿ ಕಚೇರಿಯಿಂದ ಮರಣ ನೋಂದಣಿ ಕಚೇರಿಯವರೆಗೆ ಲಂಚವಿಲ್ಲದೆ ಕೆಲಸವಾಗುವುದು ಅಪರೂಪ.
ಒಡವೆ ಧರಿಸಿದ ಒಂಟಿ ಹೆಣ್ಣು ಇಲ್ಲಿ ಸುರಕ್ಷಿತ ಎಂದು ಹೇಳುವ ಒಂದೇ ಒಂದು ಜನನಿಬಿಡ ಬಸ್ ನಿಲ್ದಾಣ ಅಥವಾ ರೈಲು ನಿಲ್ದಾಣವನ್ನು ತೋರಿಸಿ.
ಕಾನೂನು ತಜ್ಞರ ಸಲಹೆ ಪಡೆಯದೆ ಕೇವಲ ನಂಬಿಕೆಯ ಆಧಾರದ ಮೇಲೆ ಮನೆ ಅಥವಾ ಜಮೀನು ಖರೀದಿಸುವ ಧೈರ್ಯ ಎಷ್ಟು ಜನರಿಗಿದೆ.
ಈ ದೇಶದ ಸುಮಾರು ೭೫/೮೦% ಮದುವೆಗಳಲ್ಲಿ ವರದಕ್ಷಿಣೆ ಕಡ್ಡಾಯ ಎಂಬುದು ಬಹಿರಂಗ ಸತ್ಯ..
ಒಂದು ಕಡೆ ಡ್ರಗ್ ಮಾಫಿಯಾ, ಇನ್ನೊಂದು ಕಡೆ ಲ್ಯಾಂಡ್ ಮಾಫಿಯಾ, ಕ್ಯಾಪಿಟೇಷನ್ ಮಾಫಿಯಾ, ಶುಗರ್ ಮಾಫಿಯಾ, ಗಣಿ ಮಾಫಿಯಾ, ವಾಟರ್ ಮಾಫಿಯಾ ಜೊತೆಗೆ ಜಾತಿ ಧರ್ಮ ಮುಂತಾದ ವಿಭಜಕ ಶಕ್ತಿಗಳು ಇಡೀ ಆಡಳಿತ ಯಂತ್ರವನ್ನು ನಿಯಂತ್ರಿಸುತ್ತಿವೆ.
ಆದರೆ ದೇಶಭಕ್ತಿ ಮಾತ್ರ ಉಕ್ಕಿ ಹರಿಯುತ್ತದೆ.
ದೇಶಭಕ್ತಿ ಕೇವಲ ಘೋಷಣೆಯಲ್ಲ. ಅದು ನಡವಳಿಕೆ.
ದುರುಳ ನಾಯಕರಿಂದ ಮಕ್ಕಳಿಗೆ ಶಾಲೆಯಲ್ಲಿ ನೀತಿ ಪಾಠ ಹೇಳಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದರೆ ಆ ಕಪಟತನದ ಮುಖವಾಡ ಮುಂದೆ ಮಕ್ಕಳಿಗೆ ತಿಳಿಯುವುದಿಲ್ಲವೇ ?
ನುಡಿದಂತೆ ನಡೆಯಿರಿ
ಇಲ್ಲವೇ
ನಡೆದಂತೆ ನುಡಿಯಿರಿ
ಅದೇ ದೇಶಪ್ರೇಮ.
ಸರಳತೆ ಸಭ್ಯತೆ ಪ್ರೀತಿ ವಿಶ್ವಾಸವಿಲ್ಲದ ಪೇಪರ್ ಟೈಗರ್ ಗಳೋ ಟಿವಿ ಟೈಗರ್ ಗಳೋ ಆಗಿ ಒಣ ವೇದಾಂತ ಹೇಳುತ್ತಾ ಪ್ರಚಾರದ ಹಂಗಿಗೆ ಬಿದ್ದು ಬುದ್ದಿವಂತರೆಂಬ ಭ್ರಮೆಗೆ ಒಳಗಾಗಿ ವ್ಯಕ್ತಿತ್ವವೇ ಇಲ್ಲದ ಟೊಳ್ಳು ದೇಶಪ್ರೇಮ ಅಪಾಯಕಾರಿ.
ಮಾತಿನರಮನೆಯಲ್ಲಿ ಅರಳುವುದು ಮುಖವಾಡ.
ನರನಾಡಿಗಳಲ್ಲಿ ಸಮಾನತೆ ಸೌಹಾರ್ಧತೆ ಅಡಗಿರುವುದು ದೇಶಪ್ರೇಮ.
ವಂದೇ ಮಾತರಂ ಎಂದು ಕೂಗುವುದು
ದೇವಸ್ಥಾನಗಳಿಗೆ ಪ್ರವೇಶ ನಿರಾಕರಿಸುವುದು.
ವಂದೇ ಮಾತರಂ ಎನ್ನುವುದು ಮಠದಲ್ಲಿ ಪಂಕ್ತಿಬೇದ ಮಾಡುವುದು ಮತ್ತು ಅದನ್ನು ಸಮರ್ಥಿಸುವುದು.
ವಂದೇ ಮಾತರಂ ಎನ್ನುವುದು ಜಾತಿ ಸರ್ಟಿಫಿಕೇಟ್ ಹಂಚುವುದು.
ವ್ಯಕ್ತಿ ಸ್ವಾತಂತ್ರ್ಯ ಗೌರವಿಸದೆ ಇನ್ನೊಬ್ಬರನ್ನು ಹಂಗಿಸುವುದು.
ಛೆ…….
ನಮ್ಮ ನಡವಳಿಕೆ – ವರ್ತನೆ – ದಿನನಿತ್ಯದ ಚಟುವಟಿಕೆಯೇ ನಮ್ಮ ದೇಶಪ್ರೇಮ.
ಜೈ ಭಾರತ್ ಘೋಷಣೆಯಲ್ಲ.
- ವಿವೇಕಾನಂದ ಹೆಚ್ ಕೆ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ