ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಹಾಗೂ ವೈಯಕ್ತಿಕ ವಾಗಿ 1 ಲಕ್ಷ ರು ಪರಿಹಾರ ನೀಡೋದಾಗಿ ಸಾರಿಗೆ ಸಚಿವ ಶ್ರೀರಾಮುಲು ಪ್ರಕಟಿಸಿದರು.
ಗಾಯಯಾಳುಗಳಿಗೆ 50 ಸಾವಿರ ರೂ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿ.ಶ್ರೀರಾಮುಲು ಅವರು ಮೃತರ ಕುಟುಂಬಗಳಿಗೆ ಸಂತ್ವಾನ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಘಟನೆಯಿಂದ ಬಹಳ ನೋವಾಗಿದೆ. ಆದ್ದರಿಂದಲೇ ನಾನು ಸ್ವತಃ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಸಿಎಂ ಅವರು ಕೂಡ ಸೂಚನೆ ನೀಡಿ ಗಾಯಾಳುಗಳಿಗೆ, ಮೃತ ಕುಟುಂಬಗಳಿಗೆ ಸಂತ್ವಾನ ಹೇಳುವ ಕಾರ್ಯ ಮಾಡುತ್ತೇವೆ. ಘಟನೆ ಕಾರಣವಾಗಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ. ಇಲ್ಲಿರೋ ಬಸ್ ಸಮಸ್ಯೆಯನ್ನು ಶೀಘ್ರ ಪರಿಹರಿಸುತ್ತೇವೆ ಎಂದು ಹೇಳಿದರು.
ಸಣ್ಣಪುಟ್ಟ ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
17 ಜನ ತುಮಕೂರು ಆಸ್ಪತ್ರೆಯಲ್ಲಿದ್ದಾರೆ. ಕೆಲವರು ನಿಮ್ಯಾನ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇಂದು ಬೆಳಗ್ಗೆ ನಡೆದ ಅಪಘಾತದಲ್ಲಿ ಐದು ಮಂದಿ ಸಾವನ್ನಪ್ಪಿದ್ದು, 4 ಜನರ ಸ್ಥಿತಿ ಚಿಂತಾಜನಕವಾಗಿದೆ, 15 ಮಂದಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಉಳಿದಂತೆ 28 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ ಎಂದರು.
More Stories
ಡೆಂಘಿ ಜ್ವರಕ್ಕೆ 7 ವರ್ಷದ ಬಾಲಕ ಬಲಿ: ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ
ಚಿನ್ನದ ಹಗರಣ: 50ಕ್ಕೂ ಅಧಿಕ ಮಂದಿ ವಂಚನೆಗೆ ಬಲಿ!
ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು