- 2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು
- ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು
- ನಟಿ ಪವಿತ್ರ ಜಯರಾಂ ಸಾವಿನ ಬಳಿಕ ಸಾಕಷ್ಟು ನೊಂದಿದ್ದ ನಟ ಚಂದು
ಹೈದರಾಬಾದ್: ತೆಲುಗು ಧಾರಾವಾಹಿ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ನರಸಿಂಗಿ ಪೊಲೀಸ್ ಠಾಣೆ ವ್ಯಾಪ್ತಿಯ ಅಲ್ಕಾಪುರ ಕಾಲೋನಿಯಲ್ಲಿ ನಡೆದಿದೆ.
ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದರು. ಜೊತೆಗೆ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು.
ಮೃತ ನಟ ಚಂದು ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. 2015ರಲ್ಲಿ ಚಂದು ಅವರು ಶಿಲ್ಪಾ ಎಂಬುವವರ ವಿವಾಹವಾದರು. ಚಂದು ಸದ್ಯ ರಾಧಮ್ಮ ಪೆಳ್ಳಿ ಮತ್ತು ಕಾರ್ತಿಕ ದೀಪಂ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು.
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.
ಕಿರುತೆರೆ ನಟಿ ಪವಿತ್ರಾ ಜಯರಾಂ ಜತೆ ಚಂದು ಆರು ವರ್ಷಗಳ ಕಾಲ ವಿವಾಹೇತರ ಸಂಬಂಧ ಹೊಂದಿದ್ದರಂತೆ. ನಟಿ ಸಾವನ್ನು ಸಹಿಸಲಾಗದೆ ನಟ ಚಂದು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆತ್ಮಹತ್ಯೆಗೆ ಕಾರಣಗಳೇನು ಎಂದು ತನಿಖೆ ನಡೆಸುತ್ತಿದ್ದಾರೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ