ಆರು ತಿಂಗಳ ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳನ್ನು ಬಂಧಿಸಲಾಗಿತ್ತು. ಶುಕ್ರವಾರ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿದ್ದರು. ಎಲ್ಲ ಜಾಮೀನು ಪ್ರಕ್ರಿಯೆಗಳು ಸೋಮವಾರ ಪೂರ್ಣಗೊಂಡಿದ್ದರಿಂದ ಇಂದು ಬೆಳಗ್ಗೆ ಪವಿತ್ರಾ ಗೌಡ ಸೇರಿದಂತೆ 14ನೇ ಆರೋಪಿ ಪ್ರದೂಶ್ ಕೂಡ ಜೈಲಿನಿಂದ ಬಿಡುಗಡೆಯಾದರು.
ಜಾಮೀನು ನೀಡುವಾಗ ಹೈಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿದ್ದು, ಎಲ್ಲಾ ಆರೋಪಿಗಳೂ ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಇಷ್ಟೇ ಮೊತ್ತದ ಭದ್ರತೆ ನೀಡಬೇಕು ಎಂದು ಕೋರ್ಟ್ ಸೂಚಿಸಿದೆ.ಇದನ್ನು ಓದಿ –ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ಪ್ರಾಸಿಕ್ಯೂಷನ್ ಆರೋಪಿಗಳನ್ನು ಬಂಧಿಸಿದ ನಂತರ ಸೂಕ್ತವಾದ ಕಾರಣ ನೀಡಲು ವಿಫಲವಾದುದರಿಂದ ಕಾನೂನಿನ ಈ ಲೋಪದ ಆಧಾರದ ಮೇಲೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಲಾಗುತ್ತಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು