PayCM ಪೋಸ್ಟರ್ ಕೇಸ್​​-ಕೆಪಿಸಿಸಿ ಸಾಮಾಜಿಕ ಜಾಲತಾಣದ ಇಬ್ಬರ ​ಬಂಧನ

Team Newsnap
1 Min Read

ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್, PAYCM ಪೋಸ್ಟರ್ ಅಂಟಿಸಿದ ಪ್ರಕರಣವನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು ಕೆಪಿಸಿಸಿಯ ಸಾಮಾಜಿಕ ಜಾಲತಾಣದ ಇಬ್ಬರನ್ನು ಬಂಧಿಸಿದ್ದಾರೆ.

ಕೆಪಿಸಿಸಿ ಸಾಮಾಜಿಕ ಜಾಲತಾಣದ ಮಾಜಿ ಅಧ್ಯಕ್ಷ ಬಿ.ಆರ್ ನಾಯ್ಡು, ಗಗನ್ ಯಾದವ್ ಅವರನ್ನು ಪೊಲೀಸರು ಬಂಧಿತರು ಕೆ.ಆರ್ ಪುರ ದೇವಸಂದ್ರ ನಿವಾಸದಿಂದ ಗಗನ್ ರನ್ನು ಪೊಲೀಸರು ಬಂಧಿಸಿ ಕರೆತಂದಿದ್ದಾರೆ. ಹೈಗ್ರೌಂಡ್ ಹಾಗೂ ಸದಾಶಿವನಗರ ಪೊಲೀಸರಿಂದ ಇಬ್ಬರನ್ನು ಬಂಧನ ಮಾಡಿದ್ದಾರೆ.

ಬಂಧಿತರನ್ನು ವಿಚಾರಣೆಗೆ ಒಳಪಡಿಸಿಲಾಗಿದೆ. ಪೇಸಿಎಂ ಪೋಸ್ಟರ್ ಅಂಟಿಸಿದ ಹಿನ್ನೆಲೆಯಲ್ಲಿ ನಿನ್ನೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದರು.

PAYCM ಪೋಸ್ಟರ್ ಹಿನ್ನಲೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಈಗಾಗಲೇ ಘಟನೆ ಸಂಬಂಧ ಕೇಸ್ ದಾಖಲಿಸಲಾಗಿದೆ. ಡಿಸಿಪಿ ಸೆಂಟ್ರಲ್ ಈ ಬಗ್ಗೆ ತನಿಖೆ ಮಾಡುತ್ತಿದ್ದಾರೆ. ಪೋಸ್ಟರ್ ಹಾಕಿದವರನ್ನು ಪತ್ತೆ ಮಾಡಲಾಗ್ತಿದೆ ಹಾಗೂ ಎಲ್ಲೆಲ್ಲಿ ಪೋಸ್ಟರ್ ಹಾಕಿದ್ದಾರೆ ಅನ್ನೋದರ ಬಗ್ಗೆಯೂ ಮಾಹಿತಿ ಕಲೆಹಾಕಲಾಗ್ತಿದೆ.ಇದನ್ನು ಓದಿ: ನದಿ ತೀರದಲ್ಲಿ ಪಟಾಕಿ ನೆಪದಲ್ಲಿ ಬಾಂಬ್ ಸಿಡಿಸಿ ಪ್ರಯೋಗ ಮಾಡುತ್ತಿದ್ದ ಉಗ್ರ ಯಾಸಿನ್

ಕರ್ನಾಟಕ ಪಬ್ಲಿಕ್ ಪೋಸ್ಟ್ ಡಿಸ್ಪಿಗರ್ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ ಈ ಬಗ್ಗೆ ತನಿಖೆ ಮುಂದುವರೆದಿದೆ.

Share This Article
Leave a comment