December 18, 2024

Newsnap Kannada

The World at your finger tips!

PDO ಹುದ್ದೆಗಳಿಗೆ ರಾಜ್ಯಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆ: ಅಭ್ಯರ್ಥಿಗಳಿಗೆ ಕಡ್ಡಾಯ ನಿಯಮಗಳು ಪ್ರಕಟ

Spread the love

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗಾಗಿ ರಾಜ್ಯಾದ್ಯಂತ ಡಿಸೆಂಬರ್ 8ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಕರ್ನಾಟಕ ಲೋಕಸೇವಾ ಆಯೋಗ (KPSC) ಈ ಪರೀಕ್ಷೆಯನ್ನು ಆಯೋಜಿಸಿದ್ದು, 3,86,099 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

30 ಜಿಲ್ಲೆಗಳ 26 ತಾಲ್ಲೂಕು ಕೇಂದ್ರಗಳಲ್ಲಿ 1035 ಉಪ ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷಾ ವೇಳಾಪಟ್ಟಿ:
ಡಿಸೆಂಬರ್ 7ರಂದು ಮಧ್ಯಾಹ್ನ 2ರಿಂದ 4 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಡಿಸೆಂಬರ್ 8ರಂದು ಬೆಳಿಗ್ಗೆ 10ರಿಂದ 11:30ರವರೆಗೆ ಸಾಮಾನ್ಯ ಜ್ಞಾನ ಮತ್ತು ಮಧ್ಯಾಹ್ನ 2ರಿಂದ 4 ಗಂಟೆಯವರೆಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್, ಮತ್ತು ಕಂಪ್ಯೂಟರ್ ಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿವೆ.

  • ಮುನ್ನೆಚ್ಚರಿಕೆ ಕ್ರಮಗಳು:
    ಪರೀಕ್ಷೆಗಳು ಶಾಂತಯುತವಾಗಿ ನಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
  • ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
  • ಶೌಚಾಲಯ, ಕುಡಿಯುವ ನೀರು, ಬೆಳಕು, ಶುದ್ಧ ಗಾಳಿ, ಮತ್ತು ಗೋಡೆಗಡಿಯಾರಗಳು ಪ್ರತಿ ಕೊಠಡಿಯಲ್ಲಿ ಲಭ್ಯವಿರಬೇಕು.
  • ಸಿ.ಸಿ. ಕ್ಯಾಮೆರಾ ವ್ಯವಸ್ಥೆ ಪ್ರತಿ ಕೋಣೆಯಲ್ಲಿ ಅಳವಡಿಸಲಾಗಿದೆ.
  • ನಿಷೇಧಿತ ವಸ್ತುಗಳು:
  • ಸ್ಮಾರ್ಟ್ ವಾಚ್, ವಿದ್ಯುತ್ ಉಪಕರಣಗಳು, ಕ್ಯಾಲ್ಕ್ಯುಲೇಟರ್, ಮೊಬೈಲ್ ಫೋನ್ ತರುವುದು ನಿಷೇಧ.
  • ಮಹಿಳೆಯರು ಮಾಂಗಲ್ಯಸರ ಮತ್ತು ಕಾಲುಂಗುರು ಹೊರತುಪಡಿಸಿ ಇತರ ಆಭರಣಗಳನ್ನು ಧರಿಸಬಾರದು.
  • ಪುರುಷರು ಫುಲ್ ಶರ್ಟ್, ಫ್ಯಾನ್ಸಿ ಪ್ಯಾಂಟ್, ಶೂ-ಸಾಕ್ಸ್ ಧರಿಸಬಾರದು.

ಪರೀಕ್ಷಾ ಕೇಂದ್ರದ ನಿಯಮಗಳು:

  • ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿಯಲ್ಲಿರುತ್ತದೆ.
  • ಟೈಪಿಂಗ್, ಫ್ಯಾಕ್ಸ್, ಝೆರಾಕ್ಸ್ ಅಂಗಡಿಗಳು ಮುಚ್ಚಿರಬೇಕು.
  • ಪರೀಕ್ಷಾರ್ಥಿಗಳ ಹೊರತಾಗಿ ಇತರರು ಕೇಂದ್ರದೊಳಗೆ ಪ್ರವೇಶಿಸಲು ಅನುಮತಿ ಇಲ್ಲ.ಇದನ್ನು ಓದಿ –ಶೀಘ್ರದಲ್ಲೇ ವಿದ್ಯುತ್ ದರ ಏರಿಕೆಯ ಸಾಧ್ಯತೆ

ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ ಎಂದು KPSC ಸೂಚಿಸಿದೆ.

Copyright © All rights reserved Newsnap | Newsever by AF themes.
error: Content is protected !!