ಪೆಂಡ್ರೈವ್ ಕೇಸ್ : ಪ್ರಜ್ವಲ್‌ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ

Team Newsnap
1 Min Read

ಬೆಂಗಳೂರು : 42ನೇ ಎಸಿಎಂಎಂ ನ್ಯಾಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ .

ಇಂದು ಪ್ರಜ್ವಲ್‌ ರೇವಣ್ಣ ಅವರ ಎಸ್‌‍ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ವಶಕ್ಕೆ ನೀಡಬೇಕೆಂದು ಮಾಡಿದ ಮನವಿಯನ್ನು ನಿರಾಕರಿಸಿದ ನ್ಯಾಯಾಲಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ .

ಲೈಂಗಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪರಾರಿಯಾಗಿ , ಪ್ರಕರಣದ ತನಿಖೆಗೆ ಸರ್ಕಾರ ಎಸ್‌‍ಐಟಿ ರಚನೆ ಮಾಡಲಾಗಿತ್ತು.

ವಿದೇಶದಿಂದ ಪ್ರಜ್ವಲ್‌ ರೇವಣ್ಣ ಬರುತ್ತಿದ್ದಂತೆ ಎಸ್‌‍ಐಟಿ ಅವರನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆದಿತ್ತು.

ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರದಲ್ಲಿ ದಾಖಲಾಗಿರುವ ಎರಡು ಪ್ರಕರಣಗಳಲ್ಲಿ ವಿಚಾರಣೆಯನ್ನು ಅಂತ್ಯಗೊಳಿಸಿರುವ ಎಸ್‌ಐಟಿ ಮತ್ತೊಂದು ಪ್ರಕರಣದಲ್ಲಿ ವಿಚಾರಣೆ ನಡೆಸಲು ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಸರ್ಕಾರಿ ಪರ ವಕೀಲರು ಮನವಿ ಮಾಡಿದರು.

ನ್ಯಾಯಾಧೀಶರು , ವಾದ-ಪ್ರತಿವಾದ ಆಲಿಸಿ ಜ್ವಲ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದು , ಮೂರನೇ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಬಾಡಿ ವಾರಂಟ್‌ ಪಡೆಯಲು ಅರ್ಜಿ ಸಲ್ಲಿಸಲು ನ್ಯಾಯಾಲಯ ಸೂಚಿಸಿದೆ.

Share This Article
Leave a comment