January 29, 2025

Newsnap Kannada

The World at your finger tips!

prajwal Revanna 2

ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ

Spread the love

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ಹಾಸನದ ನಗರದ ಹದಿನೆಂಟು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಎಸ್ ಐಟಿ ಅಧಿಕಾರಿಗಳ ತಂಡ ಬುಧವಾರ ಬೆಳಗಿನ ಜಾವ 3.30 ರವರೆಗೂ ಶೋಧಕಾರ್ಯ ನಡೆಸಿದೆ.

ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಆಪ್ತರಾದ ಕ್ವಾಲಿಟಿ ಬಾರ್ ಶರತ್, ಪುನೀತ್, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್ಗೌಡ, ಪ್ರಜ್ವಲ್ ರೇವಣ್ಣ ಮಾಜಿ ಕಾರುಚಾಲಕ ಕಾರ್ತಿಕ್, ಶಶಿ, ಚೇತನ್ ಗೌಡ ನಿವಾಸದ ಮೇಲೂ ಎಸ್ ಐಟಿ ತಂಡಗಳು ಪ್ರತ್ಯೇಕವಾಗಿ ದಾಳಿ ನಡೆಸಿವೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿ ಕಾಂಗ್ರೆಸ್ ಕಾರ್ಯಕರ್ತ, ಸಚಿವ ಜಮೀರ್ ಅಹಮದ್ ಅವರ ಆಪ್ತ ನವೀನ್ ಗೌಡ ನಿವಾಸದ ಮೇಲೂ ಎಸ್ ಐಟಿ ದಾಳಿ ನಡೆಸಿದೆ.

Copyright © All rights reserved Newsnap | Newsever by AF themes.
error: Content is protected !!