December 22, 2024

Newsnap Kannada

The World at your finger tips!

BJP , JDS , alliance

ಕಾಂಗ್ರೆಸ್ ನೀಡಿರುವ ಗ್ಯಾರೆಂಟಿಗಳನ್ನು ನಂಬಿ ಜನ ಅಧಿಕಾರಕ್ಕೆ ತಂದಿದ್ದಾರೆ: ಎಚ್ ಡಿ ಕೆ

Spread the love

ಚನ್ನಪಟ್ಟಣ :ಬಿಜೆಪಿ, ಜೆಡಿಎಸ್ ಅನ್ನು ಮುಗಿಸಬೇಕು ಎನ್ನುವ ನಡವಳಿಕೆ ಹಾಗೂ ಹಣದ ಹೊಳೆ ಹರಿಸಿದ ಪರಿಣಾಮ ಜೆಡಿಎಸ್ ಸೋತಿದೆ ಎಂದು ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‍ಗೆ ಹೀನಾಯವಾಗಿ ಸೋಲು ಕಂಡಿತು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ಲೇಷಿಸಿದ್ದಾರೆ

ಚನ್ನಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಚುನಾವಣಾ ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಜೊತೆ ನಿಲ್ಲುತ್ತೇವೆ. ನನ್ನ ನಿರೀಕ್ಷೆ ಹುಸಿಯಾಗಿದೆ, ಮಾಧ್ಯಮಗಳ ನಿರೀಕ್ಷೆ ನಿಜವಾಗಿದೆ. ನಾನು ಕಳೆದ 6 ತಿಂಗಳಿಂದ ಶ್ರಮಪಟ್ಟು ಕೆಲಸ ಮಾಡಿದ್ದೆ. ಪಂಚರತ್ನ ಯೋಜನೆಗಳು ಜನರಿಗೆ ಹಿಡಿಸಲಿಲ್ಲ ಅನ್ಸುತ್ತೆ ಕಾಂಗ್ರೆಸ್‍ನ ಗ್ಯಾರಂಟಿಗಳ ನಂಬಿ ಮತಹಾಕಿದ್ದಾರೆ ಎಂದರು.

ಪಕ್ಷದ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ಏನೆಲ್ಲಾ ಆಗಿದೆ ಅನ್ನುವುದರ ಬಗ್ಗೆ ಮಾಹಿತಿ ಕಲೆ ಹಾಕುತ್ತೇನೆ. ಈ ರೀತಿಯ ಫಲಿತಾಂಶ ನಮ್ಮ ಪಕ್ಷಕ್ಕೆ ಹೊಸದೇನಲ್ಲ. ದೇವೇಗೌಡರು ಎರಡು ಬಾರಿ ಸೋತ ಬಳಿಕವೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿತ್ತು. ಜನ ಮುಂದಿನ ದಿನಗಳಲ್ಲಿ ಮತ್ತೆ ಜೆಡಿಎಸ್ ಬೇಕು ಅಂತ ಬಯಸ್ತಾರೆ ಎಂದು ಹೇಳಿದರು.

90 ಸಾವಿರಕ್ಕೂ ಅಧಿಕ ಮತಗಳನ್ನು ನೀಡಿರುವ ಚನ್ನಪಟ್ಟಣ ಮತದಾರರಿಗೆ ಧನ್ಯವಾದ. ಅಲ್ಲದೇ ರಾಜ್ಯದಲ್ಲಿ ಜೆಡಿಎಸ್ ಹಿನ್ನಡೆ ಕುರಿತು ಪರಾಮರ್ಶೆ ನಡೆಸುತ್ತೇನೆ ರಾಮನಗರದಲ್ಲಿ ನಿಖಿಲ್ ಸೋಲಿನ ಬಗ್ಗೆ ಹೆಚ್‍ಡಿಕೆ ಬೇಸರ ವ್ಯಕ್ತಪಡಿಸಿದರು.ಸಿದ್ದು ಸಿಎಂ : ಡಿಕೆಶಿ ಡಿಸಿಎಂ – ರಾಗಾ ಸಂಧಾನ ಸಕ್ಸಸ್ : ಮೇ 20 ರಂದು ಪದಗ್ರಹಣ

ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೃತಜ್ಞತಾ ಸಭೆಯಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳ ಕೊಡ್ತಾರಾ ಎಂಬ ವಿಚಾರ ಸಂಬಂಧ ಪ್ರತಿಕ್ರಿಯಿಸಿದರು. ನೋಡೋಣ, ನಮಗಿಂತ ಅವರು ದೊಡ್ಡವರಲ್ವೆ. ಎಲ್ಲಾ ಲೆಕ್ಕಾಚಾರ ಮಾಡಿಯೇ ಸ್ಕೀಂ ಮಾಡಿರುತ್ತಾರೆ. ಮೊದಲು ಫ್ರೀ ಅಂತ ಹೇಳಿ ಈಗ ಕೆಲವೊಂದು ಷರತ್ತು ಹಾಕ್ತಿದ್ದಾರೆ. ನೋಡೋಣ ಮುಂದೆ ಏನ್ ಮಾಡ್ತಾರೆ ಅಂತ ಎಂದರು.

Copyright © All rights reserved Newsnap | Newsever by AF themes.
error: Content is protected !!