ಹುಣಸೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜಿ.ಟಿ.ದೇವೇಗೌಡ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿದರು. ಇದನ್ನು ಓದಿ –ಚಾಮುಂಡಿ ಬೆಟ್ಟದಲ್ಲಿ ಡಿಜಿಟಲ್ ಹುಂಡಿ ವ್ಯವಸ್ಥೆ ಜಾರಿ: ಸ್ಕ್ಯಾನ್ ಮಾಡಿ ಕಾಣಿಕೆ ನೀಡಿ
ಹೆಚ್‌ಡಿಕೆ, ಜಿಟಿಡಿ ಹಾಗೂ ಸಾ.ರಾ.ಮಹೇಶ್ ಮೂವರು ಪರಸ್ಪರರ ಕೈ ಹಿಡಿದು ಕಾರ್ಯಕ್ರಮದ ದೀಪ ಬೆಳಗಿದರು. ಜಿ.ಟಿ.ದೇವೇಗೌಡರ ನಂತರ ಅವರ ಪುತ್ರ ಜಿ.ಡಿ.ಹರೀಶ್ ಗೌಡ ಜೊತೆ ಹೆಚ್‌ಡಿಕೆ ಮಾತುಕತೆ ನಡೆಸಿ ಗಮನ ಸೆಳೆದರು.
ಈ ವೇಳೆ ಸಮಾರಂಭದಲ್ಲಿ ಮಾತನಾಡಿದ ಜಿಟಿಡಿ, ನೀವು ಗಟ್ಟಿಯಾಗಿ ಜೊತೆಯಾಗಿ ಇರಿ. ಜಯಶಾಲಿಯಾಗಿ ಬನ್ನಿ ಅಂತಾ ಸ್ವಾಮೀಜಿ ಹೇಳಿದ್ದಾರೆ. ನನ್ನ ಮಗನಿಗೆ ಟಿಕೆಟ್ ಕೊಡಿ ಅಂತಾ ನಾನು ಎಂದೂ ಕುಮಾರಣ್ಣನ ಕೇಳಿಲ್ಲ ಎಂದು ತಿಳಿಸಿದರು.
ಜನತಾ ಪರಿವಾರ ಜಯಪ್ರಕಾಶ ನಾರಾಯಣ್ ಕಟ್ಟಿದ ಆಸ್ತಿ. ಈ ಪಕ್ಷ ಉಳಿಸುವ ಜವಾಬ್ದಾರಿ ಕುಮಾರಸ್ವಾಮಿ ಮೇಲಿದೆ. ಹೆಚ್.ಡಿ.ದೇವೇಗೌಡರು ಶ್ರಮದಿಂದ ಕಟ್ಟಿರುವ ಪಕ್ಷವನ್ನು ಬೆಳೆಸುವ ಜವಾಬ್ದಾರಿ ಕುಮಾರಸ್ವಾಮಿ ಅವರ ಮೇಲಿದೆ. ಜನರು ಮತ್ತು ಸ್ವಾಮೀಜಿಗಳ ಆಶೀರ್ವಾದ ನಿಮ್ಮ ಮೇಲಿದೆ ಎಂದು ಹೆಚ್‌ಡಿಕೆ ಅವರನ್ನು ಹಾರೈಸಿದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ