December 22, 2024

Newsnap Kannada

The World at your finger tips!

rajendra

ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ

Spread the love

ಮೈಸೂರು :ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಬಂಧ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ ಸರ್ಕಾರದ ಮಾರ್ಗಸೂಚಿಯಂತೆ ನಿಗದಿತ ಪರೀಕ್ಷೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೆಡ್‌ಗಳ ವ್ಯವಸ್ಥೆ, ಅಗತ್ಯ ಔಷಧಿಗಳ ದಾಸ್ತಾನಿಗೆ ಕ್ರಮವಹಿಸಿ ಎಂದರಲ್ಲದೆ, ಅಂಬುಲೆನ್ಸ್ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದರ ಜೊತೆಗೆ ಆಕ್ಸಿಜನ್ ಪ್ಲಾಂಟ್ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಶೀತ, ನೆಗಡಿ, ಕೆಮ್ಮು ಸಾಮಾನ್ಯವಾಗಿ ಬರುತ್ತದೆ ಅದಕ್ಕೆ ಹೆದರುವುದು ಬೇಡ ಮುನ್ನೆಚ್ಚರಿಕೆಯಿಂದ ಚಿಕಿತ್ಸೆ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.

ವೃದ್ದರು ರಕ್ತದ ಒತ್ತಡ, ಸಕ್ಕರೆ ಕಾಯಿಲೆ ಕಡಿಮೆ ಮಾಡುವ ಬಗ್ಗೆ ಹಾಗೂ ಆರೋಗ್ಯದ ಕಡೆ ಹೆಚ್ಚು ಗಮನಹರಿಸಲು ಅರಿವು ಮೂಡಿಸಿ ಎಂದು ತಿಳಿಸಿದರು.

ಕೋವಿಡ್ RTPCR ಪರೀಕ್ಷೆ ಪ್ರತಿ ತಾಲೂಕಿನಲ್ಲಿಯೂ ಮಾಡಿಸಲಾಗುತ್ತಿದೆ. ಬೆಂಗಳೂರು ಬಿಟ್ಟರೆ ಮೈಸೂರಿನಲ್ಲಿ ಪಾಸಿಟಿವಿಟಿ ಜಾಸ್ತಿ ಇದೆ. ಕಳೆದ 8 ದಿನಗಳಲ್ಲಿ ಮೂರು ಸಾವಾಗಿದ್ದು 84 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ. ನಿನ್ನೆ 25 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. 20 ಕೋವಿಡ್ ಸೋಂಕಿತರು ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿಗಳಾದ ಡಾ. ಮಹಾದೇವ ಪ್ರಸಾದ್ ಅವರು ಸಭೆಯಲ್ಲಿ ಮಾಹಿತಿ ನೀಡಿದರು.ರಾಜ್ಯ ರಾಜಧಾನಿಯಲ್ಲಿ 700 ಕ್ಕೂ ಹೆಚ್ಚು ಡ್ರಿಂಕ್ & ಡ್ರೈವ್ ಪ್ರಕರಣ ದಾಖಲು

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಆರ್. ಲೋಕನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರ ಸ್ವಾಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!