ಈ ಕುರಿತಂತೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತವರಣದ ಜೊತೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ, ಇನ್ನೂ ಎರಡು ದಿನ ಚಳಿ ಹೆಚ್ಚಾಗಲಿದೆ. ನಗರದೆಲ್ಲೆಡೆ ಬೆಳಗಿನ ಜಾವ ದಟ್ಟ ಮಂಜು ಆವರಿಸಿದೆ.BJP ಬಣಕಾರ್, JDS ಶ್ರೀನಿವಾಸ್, ನಿಂಗಪ್ಪ, ಮಲ್ಲಿಕಾರ್ಜುನ ಕಾಂಗ್ರೆಸ್ ತೆಕ್ಕೆಗೆ
ಇಂದು ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ಸಾಧ್ಯತೆಯಿದೆ, ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ
ಎಂದು ಇಲಾಖೆ ಹೇಳಿದೆ
ಚಳಿಯ ನಡುವೆ ಇಂದಿನಿಂದ ಮೂರು ದಿನ ಮಳೆ ಕಾಟ ಇರಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣದಿಂದಾಗಿ ನವೆಂಬರ್ 22 ರಿಂದ 24ರ ವರೆಗೆ ಮಳೆಯಾಗುವ ಮುನ್ಸೂಚನೆಯಿದೆ.
ಕರಾವಳಿ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿ ಕೆಲ ಭಾಗಗಳಲ್ಲಿ ಮಳೆ ಸಾಧ್ಯತೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು