ರಾಜ್ಯದ ಜನ ಚಳಿಗೆ ತತ್ತರ : ಕೊರೆಯುವ ಚಳಿ ನಡುವೆಯೂ ಮಳೆ ನಿರೀಕ್ಷೆ

Team Newsnap
1 Min Read

ಬೆಂಗಳೂರು ಸೇರಿ ಇಡೀ ರಾಜ್ಯದ ಅನೇಕ ಜಿಲ್ಲೆಗಳು ಚಳಿಗಾಳಿಗೆ ತತ್ತರಿಸಿವೆ . ಕಳೆದ ರಾತ್ರಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಇದು ಕಳೆದ 10 ವರ್ಷಗಳಲ್ಲಿಯೇ ನವೆಂಬರ್ ತಿಂಗಳಲ್ಲಿ ದಾಖಲಾದ ಕನಿಷ್ಠ ತಾಪಮಾನವಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತವರಣದ ಜೊತೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ, ಇನ್ನೂ ಎರಡು ದಿನ ಚಳಿ ಹೆಚ್ಚಾಗಲಿದೆ. ನಗರದೆಲ್ಲೆಡೆ ಬೆಳಗಿನ ಜಾವ ದಟ್ಟ ಮಂಜು ಆವರಿಸಿದೆ.BJP ಬಣಕಾರ್, JDS ಶ್ರೀನಿವಾಸ್, ನಿಂಗಪ್ಪ, ಮಲ್ಲಿಕಾರ್ಜುನ ಕಾಂಗ್ರೆಸ್ ತೆಕ್ಕೆಗೆ

ಇಂದು ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ಸಾಧ್ಯತೆಯಿದೆ, ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ
ಎಂದು ಇಲಾಖೆ ಹೇಳಿದೆ

ಚಳಿಯ ನಡುವೆ ಇಂದಿನಿಂದ ಮೂರು ದಿನ ಮಳೆ ಕಾಟ ಇರಲಿದೆ.

ಇಂದಿನಿಂದ ಮಳೆ 3 ದಿನ ಮಳೆ ಸಾದ್ಯತೆ :

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣದಿಂದಾಗಿ ನವೆಂಬರ್ 22 ರಿಂದ 24ರ ವರೆಗೆ ಮಳೆಯಾಗುವ ಮುನ್ಸೂಚನೆಯಿದೆ.

ಕರಾವಳಿ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿ ಕೆಲ ಭಾಗಗಳಲ್ಲಿ ಮಳೆ ಸಾಧ್ಯತೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ.

Share This Article
Leave a comment