ಶೇ. 30 ರಿಂದ 35 ಖಾಸಗಿ ಶಾಲಾ ಶುಲ್ಕ ಕಡಿತ ಸಂಭವ – ಸಧ್ಯದಲ್ಲೇ ಆದೇಶ

Team Newsnap
1 Min Read

ಖಾಸಗಿ ಶಾಲೆಗಳ ಶುಲ್ಕವನ್ನು ಶೇ. 30 ರಿಂದ ಶೇ. 35 ರಷ್ಟು ಕಡಿತ ಮಾಡಲು ಸರ್ಕಾರ ಚಿಂತನೆ ಮಾಡಿದೆ. ಈ ಕುರಿತಂತೆ ಇನ್ನೂ ನಿರ್ದಿಷ್ಟ ನಿರ್ಧಾರ ಆಗಬೇಕಿದೆ.

ಕೋವಿಡ್ ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಪೋಷಕರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ಖಾಸಗಿ ಶಾಲೆಗಳಲ್ಲಿ ಶುಲ್ಕ ಕಡಿತ ಮಾಡಲು ಮುಂದಾಗಿದೆ. ಸಧ್ಯದಲ್ಲೇ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಜನವರಿ 13 ರಂದು ಶುಲ್ಕ ಕಡಿತದ ಸಂಬಂಧ ಪೋಷಕರ , ಸಂಘಟನೆಗಳು ಹಾಗೂ ಖಾಸಗಿ ಶಾಲೆಗಳ ಮುಖ್ಯಸ್ಥರ ಸಭೆ ನಡೆಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, ಶುಲ್ಕ ಕಡಿತಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ವರದಿ ನೀಡಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಸೇರಿದಂತೆ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಮತ್ತೊಂದು ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಷ್ಟು ಪ್ರಮಾಣದಲ್ಲಿ ಶುಲ್ಕ ಕಡಿತಗೊಳಿಸಬೇಕೆಂಬ ಬಗ್ಗೆ ಅಂತಿಮ ನಿರ್ಧಾರವಾಗಲಿದೆ. ಮೂಲಗಳ ಪ್ರಕಾರ ಶೇ. 30 ರಿಂದ 35 ರಷ್ಟು ಶುಲ್ಕ ಕಡಿತವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Share This Article
Leave a comment