ಹೈಕೋರ್ಟ್ ನಿಂದ 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಅಸ್ತು

Team Newsnap
1 Min Read

ಬೆಂಗಳೂರು : ಇಂದು ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿದೆ. 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅಸ್ತು ಎಂದಿದೆ.

ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. ರಾಜೇಶ್ ರೈ ಅವರು ಇರುವ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿ ,ಸರ್ಕಾರದ ಮೇಲ್ಮನವಿ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಹೈಕೋರ್ಟ್ ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು.

ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ನಡೆ ನೀಡಿ ,ಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿತ್ತು.

5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರ ಕುರಿತಂತೆ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ ಅನಿಶ್ಚಿತತೆ ಮುಂದುವರೆದಿತ್ತು.ಕೊಂಡೋತ್ಸವದ ಕೊಂಡಕ್ಕೆ ಬಿದ್ದು ಪೂಜಾರಿಗೆ ತೀವ್ರ ಗಾಯ

ಪರೀಕ್ಷೆ ರದ್ದಾಗುತ್ತದೆಯೇ ಅಥವಾ ನಡೆಯುತ್ತದೆಯೇ ಎಂಬುದರ ಕುರಿತಾಗಿ ಗೊಂದಲ ಮುಂದುವರೆದಿದ್ದು, ಇದೀಗ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

Share This Article
Leave a comment