ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನು ಮುಂದೆ ಪಡಿತರ ಆಹಾರ ಧಾನ್ಯಗಳ ಜೊತೆಗೆ ಎಂಆರ್ ಪಿ ದರದಲ್ಲಿ ಬೇಳೆ, ಅಡುಗೆ ಎಣ್ಣೆ, ಉಪ್ಪು, ಸಕ್ಕರೆ, ಮೊಟ್ಟೆ ಸೇರಿ ಇನ್ನಿತರ ದಿನಸಿ ಪದಾರ್ಥಗಳನ್ನು ಮಾರಾಟ ಮಾಡಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಆಹಾರ ಸಚಿವ ಗೋಪಾಲಯ್ಯ ಪಡಿತರ ಮಾರಾಟದ ಜೊತೆಯಲ್ಲಿ ದಿನಸಿ ಪದಾರ್ಥಗಳನ್ನು ಮಾರಾಟ ಮಾಡಬಹುದು.
ಗ್ರಾಹಕರು ದಿನಸಿ ವಸ್ತುಗಳನ್ನು ಖರೀದಿಸಿದರೆ ಮಾತ್ರ ಪಡಿತರ ನೀಡುವುದಾಗಿ ನ್ಯಾಯಬೆಲೆ ಅಂಗಡಿಗಳು ಗ್ರಾಹಕರ ಮೇಲೆ ಒತ್ತಡ ಹಾಕುವಂತಿಲ್ಲ ಎಂಬ ಷರತ್ತು ಕೂಡ ಹಾಕಲಾಗಿದೆ.
ಯಾವುದೇ ವಸ್ತು ಖರೀದಿಗೆ ಒತ್ತಾಯ ಮಾಡುವಂತಿಲ್ಲ. ಇನ್ನು ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಪಡಿತರ ಆಹಾರ ಧಾನ್ಯಕ್ಕೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಯಾವ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ ಎಂದು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
More Stories
ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
ನಂಬುಗೆಯೇ ಇಂಬು
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ