ಉಡುಪಿ: ವ್ಯಕ್ತಿಯೋರ್ವ ತಂದೆಯನ್ನು ಮಣಿಪಾಲ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆಗೆ ದಾಖಲಿಸಿ ರಾತ್ರಿ ಕಾರಿನಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ.
ಗುರುರಾಜ್ (32) ಮೃತ ವ್ಯಕ್ತಿ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ನಿವಾಸಿ .
ಗುರುರಾಜ್ ತನ್ನ ತಂದೆಯನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿದ್ದು , ಆಸ್ಪತ್ರೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲದ ಹಿನ್ನೆಲೆ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ತನ್ನದೇ ಕಾರಿನಲ್ಲಿ ಗ್ಲಾಸ್ ಮುಚ್ಚಿ ಎಸಿ ಹಾಕಿ ಮಲಗಿದ್ದಾರೆ.
ಬೆಳಗಾಗುವಷ್ಟರಲ್ಲೇ ಉಸಿರುಗಟ್ಟಿ ಮೃತಪಟ್ಟಿದ್ದು , ಉಸಿರುಗಟ್ಟಿ ಸಾವನ್ನಪ್ಪಲು ನಿಖರ ಕಾರಣ ಮರಣೋತ್ತರ ವರದಿ ಬಳಿಕವಷ್ಟೇ ತಿಳಿಯಲಿದೆ.ಸಿದ್ದು ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರು
ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ