February 22, 2026

Newsnap Kannada

The World at your finger tips!

petrol

ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರು – ಸರ್ಕಾರದ ಅಧಿಕೃತ ಅಧಿಸೂಚನೆ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನಿನ್ನೆ ತಿಳಿಸಿದಂತೆ ರಾಜ್ಯದಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಇಂದು ಅಧಿಕೃತ ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಪೆಟ್ರೋಲ್‍ಗೆ 13.30 ರೂ. ಮತ್ತು ಡೀಸೆಲ್ 19.47 ರೂ ಕಡಿತಗೊಳಿಸಿ ಹೊಸ ದರ ಪ್ರಕಟಿಸಿದೆ.

ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಟ್ಟಿಟ್ಟರ್ ಮೂಲಕ ಕರ್ನಾಟಕ ರಾಜ್ಯ ಸರ್ಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ.

ಈ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ. ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದರು.

error: Content is protected !!