November 14, 2024

Newsnap Kannada

The World at your finger tips!

petrol,deisel,price

ಡಿ 5 ರಿಂದ ಪೆಟ್ರೋಲ್-ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 5 ರೂ. ಕಡಿತ ಸಾಧ್ಯತೆ

Spread the love

ಕಚ್ಚಾ ತೈಲದ ಬೆಲೆ ಮುಂದಿನ ದಿನಗಳಲ್ಲಿ ಇಳಿಯುವ ಸಾಧ್ಯತೆ ಇರುವ ಹಿನ್ನೆಲೆ ಇಂಧನ ಬೆಲೆಯನ್ನೂ ಮತ್ತಷ್ಟು ಕಡಿತಗೊಳಿಸುವ ಸಾಧ್ಯತೆಯಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆ ಬಹು ತಿಂಗಳ ಕನಿಷ್ಠ ಮಟ್ಟಕ್ಕೆ ತಲುಪಿದೆ. ಕಳೆದ ಕೆಲವು ವಾರಗಳಿಂದ ಕಚ್ಚಾ ತೈಲ ಬೆಲೆಯು ಬ್ಯಾರೆಲ್‌ಗೆ 90 ಅಮೆರಿಕನ್ ಡಾಲರ್ ನಂತೆ ವಹಿವಾಟು ನಡೆಸುತ್ತಿದೆ.ತೀವ್ರ ಹೃದಯಾಘಾತ: ಕ್ರಿಕೆಟಿಗ ರಿಕಿ ಪಾಂಟಿಂಗ್ ಆಸ್ಪತ್ರೆಗೆ ದಾಖಲು

ನವೆಂಬರ್‌ನಲ್ಲಿ ಕಚ್ಚಾ ತೈಲದ ಬೆಲೆ ಸುಮಾರು ಶೇ.7ರಷ್ಟು ಕಡಿಮೆಯಾಗಿದೆ. ಇದು ಇಂಧನ ಬೆಲೆ ಕಡಿತದ ಮುನ್ಸೂಚನೆಯಾಗಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆ ಸೋಮವಾರ ಅಂದರೆ ಡಿಸೆಂಬರ್ 5ರಂದು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕನಿಷ್ಠ 5 ರೂ.ಗಳಷ್ಟು ಕಡಿತಗೊಳಿಸಬಹುದು ಎಂದು ಐಐಎಫ್‌ಎಲ್ ಸೆಕ್ಯುರಿಟೀಸ್ ನಿರ್ದೇಶಕ ಮತ್ತು ಅನುಭವಿ ಮಾರುಕಟ್ಟೆ ತಜ್ಞ ಸಂಜೀವ್ ಭಾಸಿನ್ ಭವಿಷ್ಯ ನುಡಿದಿದ್ದಾರೆ.

ಕಚ್ಚಾ ತೈಲದರ ಕುಸಿತದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕನಿಷ್ಠ 5 ರೂ. ಕಡಿತವಾಗುವ ಸಾಧ್ಯತೆ ಇದೆ’ ಎಂದು ಅವರು ಹೇಳಿದ್ದಾರೆ.

ಹಲವು ತಿಂಗಳಿಂದ ಬದಲಾಗದೆ ಉಳಿದ ಇಂಧನ ಬೆಲೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 90 ಡಾಲರ್‌ಗಿಂತ ಕೆಳಗಿಳಿದಿದ್ದರೂ, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹಲವು ತಿಂಗಳುಗಳಿಂದ ಬದಲಾಗದೆ ಉಳಿದಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಮೇ 2022ರಲ್ಲಿ ಕೊನೆಯದಾಗಿ ಪರಿಷ್ಕರಿಸಲಾಯಿತು. ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಇಳಿಕೆ ಮಾಡಿತ್ತು. ಭಾರತವು ತನ್ನ ತೈಲ ಅಗತ್ಯಗಳ ಸುಮಾರು ಶೇ.85ರಷ್ಟು ಪೂರೈಸಲು ಆಮದುಗಳ ಮೇಲೆ ಅವಲಂಬಿತವಾಗಿದೆ ಎಂಬುದನ್ನು ನೀವು ಗಮನಿಸಬೇಕು. ಹೀಗಾಗಿ ಅಂತಾರಾಷ್ಟ್ರೀಯ ತೈಲ ಬೆಲೆಗಳಿಗೆ ಸ್ಥಳೀಯ ಇಂಧನ ದರಗಳನ್ನು ಮಾನದಂಡಗೊಳಿಸುತ್ತದೆ.

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಇತ್ತೀಚಿನ ದರ

ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ ಲೀಟರ್‌ಗೆ 96.72 ಮತ್ತು 89.62 ರೂ. ಇದ್ದರೆ, ಮುಂಬೈನಲ್ಲಿ ಲೀಟರ್ ಪೆಟ್ರೋಲ್ 106.31 ರೂ.ಗೆ ಮಾರಾಟವಾಗುತ್ತಿದ್ದು, ಲೀಟರ್ ಡೀಸೆಲ್ ಬೆಲೆ 94.27 ರೂ. ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 102.63 ರೂ. ಮತ್ತು ಲೀಟರ್ ಡೀಸೆಲ್ ಬೆಲೆ 94.24 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ 92.76 ರೂ. ಇದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಜುಲೈ 15ರಂದು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಲೀಟರ್‌ಗೆ 5 ರೂ. ಮತ್ತು ಡೀಸೆಲ್‌ಗೆ 3 ರೂ. ಇಳಿಕೆ ಮಾಡಿದ್ದರು. ಮತ್ತೊಂದೆಡೆ ಮೇಘಾಲಯ ಸರ್ಕಾರವು ಆಗಸ್ಟ್ 24ರಂದು ಇಂಧನಗಳ ಮೇಲೆ ವ್ಯಾಟ್ ಹೆಚ್ಚಿಸಿತು, ಈ ಕಾರಣದಿಂದ ಶಿಲ್ಲಾಂಗ್‌ನಲ್ಲಿ ಈಗ ಪೆಟ್ರೋಲ್ ಬೆಲೆ ಲೀಟರ್‌ಗೆ 96.83 ರೂ. ಆಗಿದ್ದರೆ, ಡೀಸೆಲ್ ಪ್ರತಿ ಲೀಟರ್‌ಗೆ 84.72 ರೂ.ನಂತೆ ಮಾರಾಟವಾಗುತ್ತಿದೆ.

ದೇಶದ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಅಂತಾರಾಷ್ಟ್ರೀಯ ಮಾನದಂಡದ ಬೆಲೆಗಳು ಮತ್ತು ಫಾರೆಕ್ಸ್ ದರಗಳಿಗೆ ಅನುಗುಣವಾಗಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪರಿಷ್ಕರಿಸುತ್ತದೆ.

Copyright © All rights reserved Newsnap | Newsever by AF themes.
error: Content is protected !!