ಕರ್ನಾಟಕದಲ್ಲಿ ಔಷಧೀಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಗ್ರೂಪ್ ಆಸಕ್ತಿ ತೋರಿದೆ. ಈ ಉದ್ಯಮ ಆರಂಭಿಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಮುಖ್ಯಮಂತ್ರಿಳೊಂದಿಗೆ ಮಂಗಳವಾರ ಪಿರವಲ್ ಗ್ರೂಪ್‍ನ ಅಧ್ಯಕ್ಷ ಆನಂದ್ ಪಿರವಲ್ ವರ್ಚುಯಲ್ ಸಭೆ ಮುಖಾಂತರ ಈ ಬಗ್ಗೆ ಚರ್ಚಿಸಿದರು.
ರಾಜ್ಯ ಸರ್ಕಾರ ಕಳೆದ ದಿನಗಳಲ್ಲಿ ಅನೇಕ ಸುಧಾರಣೆಗಳನ್ನು ತಂದು ಕೈಗಾರಿಕೆಗಳಿಂದ ಅತಿ ಹೆಚ್ಚು ಹೂಡಿಕೆಯನ್ನು ಆಕರ್ಷಿಸುತ್ತಿದೆ. ರಾಜ್ಯದಲ್ಲಿ ಹೂಡಿಕೆಗೆ ಅವಕಾಶಗಳನ್ನು ರಾಜ್ಯ ಸರ್ಕಾರ ತೆರೆದಿಟ್ಟಿದೆ. ಕೋವಿಡ್ 19 ಸಾಂಕ್ರಾಮಿಕ ಹೊಸ ಸವಾಲುಗಳನ್ನು ತಂದೊಡ್ಡಿದೆ. ಇತ್ತೀಚೆಗೆ ಕರ್ನಾಟಕ ನೂತನ ಕೈಗಾರಿಕಾ ನೀತಿಯನ್ನು ಘೋಷಿಸಿದೆ. ಸುಸ್ಥಿರ ಮತ್ತು ಸಮಗ್ರ ಕೈಗಾರಿಕಾ ಅಭಿವೃದ್ಧಿಗೆ ಇದು ಸಹಕಾರಿಯಾಗಿದೆ ಎಂದರು.
ಔಷಧ ತಯಾರಿಕಾ ವಲಯದಲ್ಲಿ ಕರ್ನಾಟಕದಲ್ಲಿ ಫಾರ್ಮಾ ರಫ್ತು, ಸಂಶೋಧನೆ ಮತ್ತು ಪ್ಯಾಕೇಜಿಂಗ್‍ನಲ್ಲಿ ಕರ್ನಾಟಕದಲ್ಲಿ ಅತ್ಯುತ್ತಮ ವಾತಾವರಣವಿದೆ. ಬಯೋಕಾನ್, ಜೆನೆಕಾ, ಸೇರಿದಂತೆ ಅನೇಕ ಪ್ರಖ್ಯಾತ ಸಂಸ್ಥೆಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ.ಯಾವುದೇ ಸಮಸ್ಯೆ ಇದ್ದರೂ ಅದನ್ನು ತಕ್ಷಣವೇ ಬಗೆಹರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಪಿರವiಲ್ ಗ್ರೂಪ್‍ನ ಅಧ್ಯಕ್ಷ ಆನಂದ್ ಪಿರಮಲ್ ಮಾತನಾಡಿ, ತಮ್ಮ ಸಂಸ್ಥೆಗೆ ಔಷಧ ತಯಾರಿಕೆಯಲ್ಲಿ ಅಪಾರ ಅನುಭವವಿದೆ; ಜಾಗತಿಕ ಮಟ್ಟದಲ್ಲಿ ಶಾಖೆಗಳನ್ನು ಹೊಂದಿದೆ. ಔಷಧ ತಯಾರಿಕೆಯನ್ನು ಕರ್ನಾಟಕದಲ್ಲಿ ವಿಸ್ತರಿಸಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು.
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಮಾತನಾಡಿ ರಾಜ್ಯದಲ್ಲಿ ಉದ್ಯಮಸ್ನೇಹಿ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗಿದೆ.ಕೈಗಾರಿಕಾ ಅಭಿವೃದ್ಧಿಗೆ ಎಲ್ಲಾ ಹಂತಗಳಲ್ಲಿಯೂ ಹೂಡಿಕೆಗೆ ಇರುವ ವಿಪುಲ ಅವಕಾಶಗಳ ಬಗ್ಗೆ ವಿವರಿಸಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್,ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಉಪಸ್ಥಿತರಿದ್ದರು.
More Stories
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ