2.35 ಕೋಟಿರು ಲೂಟಿಗೆ ಪ್ಲಾನ್: ಭೋವಿ ಅಭಿವೃದ್ಧಿ ನಿಗಮ ನಿರ್ದೇಶಕನ ವಿರುದ್ಧ FIR – ಆರೋಪಿ ಪರಾರಿ

Team Newsnap
1 Min Read

ಸಹಿ ಪೋರ್ಜರಿ ಮಾಡಿ 2.35 ಕೋಟಿ ರು ಸರ್ಕಾರಿ ಹಣ ಮಂಜೂರಾತಿಗೆ ಯತ್ನಿಸಿರುವ ಆರೋಪದ ಹಿನ್ನೆಲೆಯಲ್ಲಿ ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ರವಿಕುಮಾರ್ ವಿರುದ್ಧ FIR ದಾಖಲಾಗಿದೆ.

ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಹಾಗೂ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ಅವರ ಸಹಿ ಫೋರ್ಜರಿ ಮಾಡಿರುವ ಆರೋಪದ ಮೇಲೆ ರವಿಕುಮಾರ್ ಮೇಲೆ ಎಫ್​ಐಆರ್ ದಾಖಲಾಗಿದೆ.

ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ IPC 420, 506,  504, 509, 380, 465, 468, 471 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಭೋವಿ ಅಭಿವೃದ್ಧಿ ನಿಗಮದ ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ಸಹಿಯನ್ನು ನಕಲು ಮಾಡಿ 2.35 ಕೋಟಿ ಲೂಟಿ ಮಾಡಲು ಪ್ಲಾನ್ ಮಾಡಿರುವ ಆರೋಪ ರವಿಕುಮಾರ್ ಮೇಲೆ ಇದೆ. ಹೀಗಾಗಿ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಐಪಿಸಿ 420 ಅಡಿಯಲ್ಲಿ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಹಾಗೂ ಪ್ರಧಾನ ವ್ಯವಸ್ಥಾಪಕ ಡಾ. ಬಿ.ಕೆ ನಾಗರಾಜಪ್ಪ ದೂರು ದಾಖಲಿಸಿದ್ದಾರೆ.
ದೂರು ದಾಖಲಾಗುತ್ತಿದ್ದಂತೆ ರವಿಕುಮಾರ್ ಪರಾರಿಯಾಗಿದ್ದಾನೆ .

ಕಳೆದ ಮಾರ್ಚ್​ನಲ್ಲಿ ನಿಗಮಕ್ಕೆ ಸೇರಿದ್ದ ಐಸಿಐಸಿಐ ಬ್ಯಾಂಕ್​ನ ಚೆಕ್​ಗಳು ಕಳುವಾಗಿದ್ದವು. ಹೀಗಾಗಿ ಐಸಿಐಸಿಐ ಬ್ಯಾಂಕ್​ಗೆ ಭೋವಿ ಅಭಿವೃದ್ಧಿ ನಿಗಮ ದೂರು ನೀಡಿತ್ತು.

ಕಳುವಾಗಿದ್ದ ಚೆಕ್ ಬಳಸಿ ರಾಯಚೂರು ಜಿಲ್ಲೆಗೆ 52 ಲಕ್ಷ ರು ಹಣವನ್ನು ನಿರ್ದೇಶಕ ರವಿಕುಮಾರ್ ಜಮಾ ಮಾಡಿದ್ದರಂತೆ. 52 ಲಕ್ಷ ಅಕ್ರಮವಾಗಿ ಜಮಾ ಮಾಡಿರುವುದಲ್ಲದೇ 60 ಅಕ್ರಮ ಫಲಾಪೇಕ್ಷಿಗಳ ಹೆಸರಲ್ಲಿ 1 ಕೋಟಿ 83 ಲಕ್ಷ ಹಣ ಮಂಜೂರಾತಿಗೆ ಸಹಿ ಫೊರ್ಜರಿ ಮಾಡಿದ್ದರು.

ಏಳು ಜಿಲ್ಲೆಯ ಅಧಿಕಾರಿಗಳಿಗೆ ಇ-ಮೇಲ್ ಕಳುಹಿಸಿರೋದು ಗೊತ್ತಾಗಿದೆ. ಮೇ 04 ರಂದು ಭೋವಿ ಅಭಿವೃದ್ಧಿ ನಿಗಮ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ರವಿಕುಮಾರ್ ಅಕ್ರಮ ಮಾಡಿರೋದು ಎಲ್ಲರ ಗಮನಕ್ಕೆ ಬಂದಿದೆ ಎನ್ನಲಾಗಿದೆ.
ಇದನ್ನ ಪ್ರಶ್ನಿಸಲು ಮುಂದಾದ ಕೆಎಎಸ್ ಅಧಿಕಾರಿಗಳಿಗೆ ರವಿಕುಮಾರ್ ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.

Share This Article
Leave a comment