ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಬಳಿ ಇರುವ ಕ್ರಷರ್ ನಲ್ಲಿ ಲಾರಿಯಲ್ಲಿದ್ದ ಜಿಲೆಟಿನ್ ಸ್ಫೋಟಗೊಂಡು ಕಾರ್ಮಿಕರು ಬಲಿಯಾದ ಘಟನೆಗೆ ಪ್ರಧಾನಿ ನರೇಂದ್ರ ಮೋದಿಯವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ಪಿಎಂಓ ಇಂಡಿಯಾ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿರುವ ಪ್ರಧಾನಿ ಶಿವಮೊಗ್ಗದಲ್ಲಿ ಘನಘೋರ ದುರಂತ ಸಂಭವಿಸಿದೆ. ಈ ಘಟನೆ ಸಾಕಷ್ಟು ನೋವು ತಂದಿದೆ. ಮೃತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ, ಇನ್ನು ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳುವಂತಾಗಲಿ. ಅಲ್ಲದೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಕಲ ರೀತಿಯಲ್ಲಿ ನೆರವು ನೀಡುತ್ತದೆ ಎಂದು ಹೇಳಿದ್ದಾರೆ.
ಸಿಎಂ ಟ್ವೀಟ್ ನಲ್ಲಿ ಸಂತಾಪ :
ಮುಖ್ಯ ಮಂತ್ರಿ ಯಡಿಯೂರಪ್ಪ ಅವರೂ ಸಹ ಶಿವಮೊಗ್ಗ ದುರಂತ ಘಟನೆಗೆ ತೀವ್ರ ಆಘಾತಕಾರಿ ಹಾಗೂ ದುರಾದೃಷ್ಟಕರ ಎಂದು ಹೇಳಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ವರಿಗೆ ಚಿಕಿತ್ಸೆ ನೀಡಲಾಗುತ್ತದೆ. ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಮಾಡಿದ್ದಾರೆ. ಈ ಘಟನೆ ಕುರಿತಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು