ಪಿಎಂ ಕಿಸಾನ್‌ 12ನೇ ಕಂತಿನ ಹಣ ಬಿಡುಗಡೆ – ಕರ್ನಾಟಕದ 53 ಲಕ್ಷ ರೈತರಿಗೆ 1007.26 ಕೋಟಿ ರು‌ ಕೊಡುಗೆ

Team Newsnap
1 Min Read

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತಿನ ನೆರವನ್ನು ಬಿಡುಗಡೆ ಮಾಡಿದ್ದಾರೆ, ರಾಜ್ಯದ 50.36 ಲಕ್ಷ ರೈತರಿಗೆ 1007.26 ಕೋಟಿ ರೂ. ಗಳನ್ನು ವರ್ಗಾವಣೆ ಮಾಡಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳು, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವರ್ಚುವಲ್ ಆಗಿ ಈ ಸಮಾರಂಭದಲ್ಲಿ ಪಾಲ್ಗೊಂಡರು.

ಯೋಜನೆಯ ಅಂಶಗಳು:

ಕೇಂದ್ರ ಸರ್ಕಾರದಿಂದ 53.83 ಲಕ್ಷ ರೈತ ಕುಟುಂಬಗಳು ಕನಿಷ್ಠ ಒಂದು ಕಂತು ಪಡೆಯುವ ಮೂಲಕ ಯೋಜನೆಯ ಲಾಭ ಪಡೆದಿದ್ದಾರೆ.

ಮಾರ್ಚ್ 2019 ರಿಂದ ಜುಲೈ 2022 ರವರೆಗೆ 53.83 ಲಕ್ಷ ರೈತ ಕುಟುಂಬಗಳು ಭಾರತ ಸರ್ಕಾರದಿಂದ ಒಟ್ಟು 9.968.57 ಕೋಟಿ ಆರ್ಥಿಕ ಸಹಾಯಧನ ಪಡೆದುಕೊಂಡಿವೆ. ಆದರೆ 2022-23 ನೇ ಸಾಲಿನಲ್ಲಿ 1,251.98 ಕೋಟಿಗಳ ಆರ್ಥಿಕ ಸಹಾಯಧನ ವರ್ಗಾವಣೆಯಾಗಿದೆ.

ರಾಜ್ಯ ಸರ್ಕಾರದಿಂದ ಪಿಎಂ ಕಿಸಾನ್ – ಕರ್ನಾಟಕ ಯೋಜನೆಯಡಿ ಭಾರತ ಸರ್ಕಾರದಿಂದ ಅನುಮೋದಿಸಲ್ಪಟ್ಟ ರೈತ ಕುಟುಂಬಗಳಿಗೆ 2019 ರಿಂದ ಇಲ್ಲಿವರೆಗೆ 4,821.37 ರೂ. ಹಾಗೂ 2022-23ನೇ ಸಾಲಿನಲ್ಲಿ 956.71 ಕೋಟಿಗಳ ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ.

Share This Article
Leave a comment