ದೇಶದ ರೈತರಿಗೆ ಬರಲಿದೆ ಸಿಹಿಸುದ್ದಿ. ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ನೀಡಲಾಗುತ್ತಿರುವ ಹಣ ಸದ್ಯದಲ್ಲೇ ದ್ವಿಗುಣಗೊಳ್ಳಲಿದೆ.
ಈಗ ಪ್ರತಿ ನಾಲ್ಕು ತಿಂಗಳಿಗೊಮ್ಮೆ ೨ ಸಾವಿರ ರೂ. ನೀಡಲಾಗುತ್ತಿದೆ. ಅದು ೪ ಸಾವಿರರು.ಗೆ ಹೆಚ್ಚಳಗೊಳ್ಳಲಿದೆ. ಅಂದರೆ ವಾರ್ಷಿಕ ಬರುತ್ತಿರುವ 6 ಸಾವಿರರೂ.ಗಳು 12 ಸಾವಿರಕ್ಕೆ ಏರಲಿದೆ.
ಬಿಹಾರದ ಕೃಷಿ ಸಚಿವ ಅಮರೇಂದ್ರ ಪ್ರತಾಪ್ ಸಿಂಗ್, ಕೇಂದ್ರದ ಕೃಷಿ ಸಚಿವ ನರೇಂದ್ರಸಿಂಗ್ ತೋಮರ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿಯಲ್ಲಿ ಭೇಟಿ ಮಾಡಿ ಈ ಸಂಬಂಧ ಚರ್ಚಿಸಿದರು.
ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಪ್ರಮಾಣವನ್ನು ದ್ವಿಗುಣಗೊಳಿಸಲು ಸಿದ್ಧತೆ ನಡೆಸಿದೆ ಎಂದು ಪ್ರತಾಪ್ ಸಿಂಗ್ ಹೇಳಿದರೆಂದು ವರದಿಯಾಗಿದೆ.
ಇತ್ತ ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೇಶಾದ್ಯಂತ 9.75 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ 19,500 ಕೋಟಿ ರು.ಗಳನ್ನು ವರ್ಗಾಯಿಸಿದ್ದಾರೆ.
ರೈತರ ಜೀವನ ಸುಲಭಗೊಳಿಸಲು ಸರ್ಕಾರ ಯತ್ನಿಸುತ್ತಿದೆ ಎಂದು ಹೇಳಿದ್ದರು. ಪಿಎಂ ಕಿಸಾನ್ ಸಮ್ಮಾನ್ ನಿಧಿಯಲ್ಲಿ ಕೇಂದ್ರವು 9 ಕಂತುಗಳನ್ನು ಬಿಡುಗಡೆ ಮಾಡಿದೆ. 2018 ರಲ್ಲಿಈ ಯೋಜನೆ ಆರಂಭಗೊಂಡಿದೆ.
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್