ಪಿಎಂ ಕಿಸಾನ್ ಯೋಜನೆ: 10ನೇ ಕಂತಿನಡಿ ಕರ್ನಾಟಕಕ್ಕೆ 685 ಕೋಟಿ ರು ಹಣ ಬಿಡುಗಡೆ

Team Newsnap
1 Min Read

ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ 10ನೇ ಕಂತಿನ ಹಣ ಬಿಡುಗಡೆ ಮಾಡಿದರು

10ನೇ ಕಂತಿನಡಿ ಕರ್ನಾಟಕ ರಾಜ್ಯದ ಒಟ್ಟು 34,264,01 ರೈತರಿಗೆ 685.28 ಕೋಟಿ ರೂ.ಗಳನ್ನು ರೈತರಿಗೆ ತಲಾ 2 ಸಾವಿರ ರೂ.ಗಳಂತೆ ಬಿಡುಗಡೆಯಾಗಿದೆ.

2018-19 ರಿಂದ ಜ.1, 2022 ರವರೆಗೆ 10ನೇ ಕಂತಿನವರೆಗೆ ರಾಜ್ಯದ ಒಟ್ಟು 54 ಲಕ್ಷದ 52 ಸಾವಿರ ರೈತ ಕುಟುಂಬಗಳಿಗೆ ಒಟ್ಟು 8,707 ಕೋಟಿ, 97ಲಕ್ಷ ರೂ. ಬಿಡುಗಡೆಯಾದಂತಾಗಿದೆ.

ಕರ್ನಾಟಕದಲ್ಲಿ ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಕಳೆದ 2019 ಫೆ.1ರಿಂದ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿ ವಾರ್ಷಿಕ ರೂ 6,000 ರೂ.ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ.

ಈ ಅನುದಾನವನ್ನು 2,000 ರೂ.ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ಇದನ್ನು ನೀಡಲಾಗುತ್ತಿದೆ. 2,850 ಕೋಟಿ 54 ಲಕ್ಷ ರೂ.ಗಳಷ್ಟು ಕರ್ನಾಟಕ ಸರ್ಕಾರದಿಂದ ಹೆಚ್ಚುವರಿಯಾಗಿ ರೈತರಿಗೆ ಹಣ ಪಾವತಿಯಾಗಿದೆ.

Share This Article
Leave a comment