ಮೂರು ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಳಗಿನ ಜಾವ 3.30 ರ ವೇಳೆಗೆ ವಾಷಿಂಗ್ಟನ್ ಡಿಸಿ ತಲುಪಿದರು.
ಮೋದಿ ಅಮೆರಿಕ ತಲುಪಿದ ನಂತರ ಅವರನ್ನು ಅಲ್ಲಿನ ಅನಿವಾಸಿ ಭಾರತೀಯರು ಆತ್ಮೀಯವಾಗಿ, ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಮೋದಿಯನ್ನು ಬರ ಮಾಡಿಕೊಂಡರು.
ಪ್ರವಾಸದಲ್ಲಿ ಯಾವೆಲ್ಲಾ ಕಾರ್ಯಕ್ರಮ:
- 5 ಕಂಪನಿಗಳ ಸಿಇಒ ಭೇಟಿ ನಂತರ ಏರ್‌ಬೇಸ್‌ನಿಂದ ಕಾರ್ಕೇಡ್ ಪೆನ್ಸಿಲ್ವೇನಿಯಾ ಅವೆನ್ಯೂದಲ್ಲಿರುವ ಹೋಟೆಲ್ಗೆ ಮೋದಿ ಹೋಗಿದ್ದಾರೆ.
- ಜೋ ಬೈಡನ್ ಅಧ್ಯಕ್ಷರಾದ ಬಳಿಕ ಮೋದಿ ಅವರ ಮೊದಲ ಅಮೆರಿಕ ಪ್ರವಾಸ ಇದಾಗಿದೆ. ನಾಳೆ ವೈಟ್ಹೌಸ್ಗೆ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ಅಧ್ಯಕ್ಷ ಬೈಡನ್ ಜೊತೆ ಮೊದಲ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
- ನಂತರ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲಿ ದ್ದಾರೆ.
- ಇಂದು ಐದು ಪ್ರಮುಖ ಕಂಪನಿಗಳ ಸಿಇಒಗಳನ್ನು ಭೇಟಿಯಾಗಲಿದ್ದಾರೆ –
- ಕ್ವಾಲ್ಕಾಮ್ (Qualcomm), ಅಡೋಬ್ (Adobe), ಫಸ್ಟ್ ಸೋಲಾರ್(First Solar), ಜನರಲ್ ಅಟೊಮಿಕ್ಸ್ (General Atomics) ಮತ್ತು ಬ್ಲ್ಯಾಕ್ಸ್ಟೋನ್ (Blackstone) ಕಂಪನಿಗಳ ಜೊತೆ ಮೋದಿ ಮಾತುಕತೆ ನಡೆಸಲಿದ್ದಾರೆ.
- ರಾತ್ರಿ 11 ಗಂಟೆ ಸುಮಾರಿಗೆ (ಭಾರತೀಯ ಕಾಲಮಾನ) ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಅವರನ್ನು ವಿಲ್ಲಾರ್ಡ್ ಹೋಟೆಲ್‌ನಲ್ಲಿ ಭೇಟಿಯಾಗಲಿದ್ದಾರೆ.
- ಇಂದು (ಭಾರತೀಯ ಕಾಲಮಾನ ರಾತ್ರಿ 12 ಗಂಟೆ ಸುಮಾರಿಗೆ)
ಅಮೇರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಅವರನ್ನು ಐಸನ್‌ಹೋವರ್ ಎಕ್ಸಿಕ್ಯೂಟಿವ್ ಆಫೀಸ್ನಲ್ಲಿ ಭೇಟಿಯಾಗಲಿದ್ದಾರೆ. - ಶನಿವಾರ ನ್ಯೂಯಾರ್ಕ್ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (ಯುಎನ್ ಜಿಎ) 76ನೇ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ..
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ