Main News

ಅಮೆರಿಕ ತಲುಪಿದ ಪ್ರಧಾನಿ : ಭಾರತೀಯರಿಂದ ಸ್ವಾಗತ- 3 ದಿನ‌ದ ದಿನಚರಿ ಹೇಗಿದೆ?

ಮೂರು ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಳಗಿನ ಜಾವ 3.30 ರ ವೇಳೆಗೆ ವಾಷಿಂಗ್ಟನ್ ಡಿಸಿ ತಲುಪಿದರು.‌

ಮೋದಿ ಅಮೆರಿಕ ತಲುಪಿದ ನಂತರ ಅವರನ್ನು ಅಲ್ಲಿನ ಅನಿವಾಸಿ ಭಾರತೀಯರು ಆತ್ಮೀಯವಾಗಿ, ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಮೋದಿಯನ್ನು ಬರ ಮಾಡಿಕೊಂಡರು.

ಪ್ರವಾಸದಲ್ಲಿ ಯಾವೆಲ್ಲಾ ಕಾರ್ಯಕ್ರಮ:

  • 5 ಕಂಪನಿಗಳ ಸಿಇಒ ಭೇಟಿ ನಂತರ ಏರ್‌ಬೇಸ್‌ನಿಂದ ಕಾರ್ಕೇಡ್ ಪೆನ್ಸಿಲ್ವೇನಿಯಾ ಅವೆನ್ಯೂದಲ್ಲಿರುವ ಹೋಟೆಲ್​ಗೆ ಮೋದಿ ಹೋಗಿದ್ದಾರೆ.
  • ಜೋ ಬೈಡನ್​ ಅಧ್ಯಕ್ಷರಾದ ಬಳಿಕ ಮೋದಿ ಅವರ ಮೊದಲ ಅಮೆರಿಕ ಪ್ರವಾಸ ಇದಾಗಿದೆ. ನಾಳೆ ವೈಟ್​ಹೌಸ್​​​ಗೆ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ಅಧ್ಯಕ್ಷ ಬೈಡನ್​ ಜೊತೆ ಮೊದಲ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
  • ನಂತರ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲಿ ದ್ದಾರೆ.
  • ಇಂದು ಐದು ಪ್ರಮುಖ ಕಂಪನಿಗಳ ಸಿಇಒಗಳನ್ನು ಭೇಟಿಯಾಗಲಿದ್ದಾರೆ –
  • ಕ್ವಾಲ್ಕಾಮ್ (Qualcomm), ಅಡೋಬ್ (Adobe), ಫಸ್ಟ್ ಸೋಲಾರ್(First Solar), ಜನರಲ್ ಅಟೊಮಿಕ್ಸ್ (General Atomics)​ ಮತ್ತು ಬ್ಲ್ಯಾಕ್​ಸ್ಟೋನ್ (Blackstone) ಕಂಪನಿಗಳ ಜೊತೆ ಮೋದಿ ಮಾತುಕತೆ ನಡೆಸಲಿದ್ದಾರೆ.
  • ರಾತ್ರಿ 11 ಗಂಟೆ ಸುಮಾರಿಗೆ (ಭಾರತೀಯ ಕಾಲಮಾನ) ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಅವರನ್ನು ವಿಲ್ಲಾರ್ಡ್ ಹೋಟೆಲ್‌ನಲ್ಲಿ ಭೇಟಿಯಾಗಲಿದ್ದಾರೆ.
  • ಇಂದು (ಭಾರತೀಯ ಕಾಲಮಾನ ರಾತ್ರಿ 12 ಗಂಟೆ ಸುಮಾರಿಗೆ)
    ಅಮೇರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಅವರನ್ನು ಐಸನ್‌ಹೋವರ್ ಎಕ್ಸಿಕ್ಯೂಟಿವ್ ಆಫೀಸ್​ನಲ್ಲಿ ಭೇಟಿಯಾಗಲಿದ್ದಾರೆ.
  • ಶನಿವಾರ ನ್ಯೂಯಾರ್ಕ್​​ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (ಯುಎನ್ ಜಿಎ) 76ನೇ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ..
Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024