ಸೇನೆ ಜೊತೆ ಮೋದಿ ದೀಪಾವಳಿ ಆಚರಣೆ‌‌ ಸಂಪ್ರದಾಯ ಮುಂದುವರಿಕೆ

Team Newsnap
1 Min Read

2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರದಲ್ಲಿ ಪ್ರತಿ ವರ್ಷ ಗಡಿಯಲ್ಲಿ ದೀಪಾವಳಿ ಆಚರಣೆ ಮಾಡುತ್ತಾ ಬರುತ್ತಿದ್ದಾರೆ.

ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಮೋದಿ ಅವರು ಗಡಿ ಭಾಗಕ್ಕೆ ತೆರಳುವುದಿಲ್ಲ ಎಂದು ಹೇಳಲಾಗಿತ್ತು. ಆದರೆ, ಈ ಬಾರಿಯು ಸಂಪ್ರದಾಯದಂತೆ ಅವರು ಗಡಿ ಭಾಗಕ್ಕೆ ತೆರಳಿ ದೀಪಾವಳಿ ಆಚರಣೆ ಮಾಡಿದ್ದಾರೆ.

ರಾಜಸ್ಥಾನದ ಜೈಸಾಲ್ಮೇರ್ ಗಡಿಯಲ್ಲಿ ಭಾರತೀಯ ಸೈನಿಕರೊಂದಿಗೆ ಮೋದಿ ದೀಪಾವಳಿ ಹಬ್ಬ ಆಚರಿಸಿದ್ದಾರೆ.

ರಾಜಸ್ಥಾನದ ಲಾಂಗ್‌ವಾಲಾ ಪೋಸ್ಟ್‌ನಲ್ಲಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಮ್ಮ ವೀರ ಯೋಧರ ಬಗ್ಗೆ ಭಾರತೀಯರಿಗೆ ಹೆಮ್ಮೆ ಇದೆ. ನಮ್ಮ ಗಡಿಗಳ ರಕ್ಷಣೆಯಿಂದ ನಮ್ಮ ಸೇನಾ ಪಡೆಗಳನ್ನು ತಡೆಯಲು ಜಗತ್ತಿನ ಯಾವುದೇ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನೀವು ಹಿಮದಿಂದ ಆವೃತವಾದ ಪರ್ವತಗಳಲ್ಲಿ ಅಥವಾ ಮರುಭೂಮಿಗಳಲ್ಲಿರಬಹುದು, ನಾನು ನಿಮ್ಮೊಂದಿಗಿದ್ದಾಗ ಮಾತ್ರ ನನ್ನ ದೀಪಾವಳಿ ಹಬ್ಬ ಸಂಪೂರ್ಣಗೊಳ್ಳುತ್ತದೆ. ನಿಮ್ಮ ಮುಖದಲ್ಲಿನ ಸಂತೋಷವನ್ನು ನೋಡಿದಾಗ ನನ್ನ ಸಂತೋಷ ದ್ವಿಗುಣಗೊಳ್ಳುತ್ತದೆ ಎಂದು ಇದೇ ವೇಳೆ ಹೇಳಿದ್ದಾರೆ.

Share This Article
Leave a comment