ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2 ಉದ್ಘಾಟಿಸಿದ ಪ್ರಧಾನಿ ಮೋದಿ – ವಂದೇ ಭಾರತ್ ರೈಲಿಗೂ ಚಾಲನೆ

Team Newsnap
1 Min Read

ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2 ಅನ್ನು ಶುಕ್ರವಾರ ಉದ್ಘಾಟಿಸಿದರು. ಹೆಲಿಕಾಪ್ಟರ್ ಮೂಲಕ ಕೆಂಪೇಗೌಡ ಏರ್ ಪೋರ್ಟ್ ಗೆ ತೆರಳಿದ ಮೋದಿ ಲೋಕಾರ್ಪಣೆಗೆ ಸಜ್ಜಾಗಿದ್ದ ಭವ್ಯವಾದ ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2 ಉದ್ಘಾಟಿಸಿದ್ದಾರೆ.

ASI , crime , police

ಭಾರತದಲ್ಲೇ ಮುಂಬೈ ಮತ್ತು ದೆಹಲಿಯನ್ನು ಹೊರತುಪಡಿಸಿದರೆ 2ನೇ ಟರ್ಮಿನಲ್ ಹೊಂದಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂಬ ಹೆಗ್ಗಳಿಕೆಗೆ ಹಲವು ವಿಶೇಷತೆಗಳಿಂದ ಗಮನ ಸೆಳೆದಿರುವ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.

ಟರ್ಮಿನಲ್ 2ದಲ್ಲಿ ಪ್ರಯಾಣಿಕರು 10,000 ಚದರ ಮೀಟರ್ ಉದ್ದದ ಹಸಿರು ಗೋಡೆಗಳು, ನೇತಾಡುವ ಉದ್ಯಾನಗಳು ಮತ್ತು ಹೊರಾಂಗಣ ಉದ್ಯಾನಗಳ ಮೂಲಕ ಪ್ರಯಾಣಿಸಬಹುದು. ದಾಖಲೆ ಬರೆದ ವಿಶ್ವದ ಎತ್ತರದ ಕೆಂಪೇಗೌಡ ಪ್ರತಿಮೆ : ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆ

ಪ್ರಧಾನಿ ಮೋದಿಯಿಂದ ಕನಕದಾಸ ಪ್ರತಿಮೆಗೆ ಪುಷ್ಪಾರ್ಚನೆ

ಮೊದಲು ವಿಧಾನಸೌಧಕ್ಕೆ ಬಂದ ಪ್ರಧಾನಿ ಮೋದಿ ಕನಕದಾಸ ಪುತ್ಥಳಿಗೆ ನಮನ ಸಲ್ಲಿಸಿ ಪುಷ್ಪಾರ್ಚನೆ ಮಾಡಿದರು.

ವಂದೇ ಭಾರತ್ ರೈಲಿಗೂ ಚಾಲನೆ :

ದಕ್ಷಿಣ ಭಾರತದ ಮೊಟ್ಟಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಪ್ರಧಾನಿ ಮೋದಿ ಬೆಂಗಳೂರಿನ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಫ್ಲಾಟ್ ಫಾರ್ಮ್ ನಂ.7ಅಲ್ಲಿ ಹಸಿರು ನಿಶಾನೆ ನೀಡಿದರು.

WhatsApp Image 2022 11 11 at 11.53.23 AM

ಮೈಸೂರು-ಚೆನ್ನೈ-ಬೆಂಗಳೂರು ಮಾರ್ಗವಾಗಿ ಹಾಗೂ ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವಾಗಿ ಈ ರೈಲು ಸಾಗಲಿದೆ. ರೈಲ್ವೆ ನಿಲ್ದಾಣಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಕೂಡ ಆಗಮಿಸಿದ್ದರು. ಮೋದಿ ಚಾಲನೆ ನೀಡಿದ ಬಳಿಕ ರೈಲು ಚೆನ್ನೈ ಕಡೆ ಪ್ರಯಾಣ ಬೆಳೆಸಿತು.

ಮೊದಲಿಗೆ ಟ್ರೇನ್-18 ಎಂದು ನಾಮಕರಣ ಮಾಡಲಾಗಿತ್ತು. ನಂತರ ವಂದೇ ಭಾರತ್ಎಕ್ಸ್ ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ.

Share This Article
Leave a comment