ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸುಪ್ರೀಂಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆಯಿತು.
ವಿಚಾರಣೆ ನಡೆಸಿದ ಕೋರ್ಟ್ ಸೋಮವಾರ ಸಂಪೂರ್ಣ ಮಾಹಿತಿ ಆಧರಿಸಿ ಆದೇಶ ನೀಡುವುದಾಗಿ ತಿಳಿಸಿ ತೀರ್ಪನ್ನು ಕಾಯ್ದಿರಿಸಿದೆ.
ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಹೈಕೋರ್ಟ್ ರಿಜಿಸ್ಟರ್ ಜನರಲ್ ನೇಮಿಸಿ ಆದೇಶ ಹೊರಡಿಸಿದೆ.
ರಿಜಿಸ್ಟರ್ ಜನರಲ್ ಆಫ್ ಪಂಜಾಬ್ & ಹರಿಯಾಣ ಹೈಕೋರ್ಟ್ ನೇಮಕ ಮಾಡಿ ಆದೇಶ ಹೊರಡಿಸಿದೆ. ಇವರಿಗೆ ಮಾಹಿತಿ ನೀಡಲು ಇಬ್ಬರು ನೋಡಲ್ ಅಧಿಕಾರಿಗಳ ನೇಮಕ ಮಾಡಿದೆ.
ಚಂಡೀಗಢ ಪೊಲೀಸ್ ಡಿಜಿ, ಎನ್ಐಎ ಅಧಿಕಾರಿಗಳ ನೇಮಕ ಮಾಡಿದೆ. ಮಾತ್ರವಲ್ಲ ಸದ್ಯಕ್ಕೆ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಪಂಜಾಬ್ ಸರ್ಕಾರ, ಕೇಂದ್ರ ಇಲಾಖೆಗಳಿಗೆ ಸುಪ್ರೀಂ ಸೂಚನೆ ನೀಡಿದೆ. ಸೋಮವಾರ ಸಂಪೂರ್ಣ ಮಾಹಿತಿ ಆಧರಿಸಿ ಮುಂದಿನ ಆದೇಶ ನೀಡುವುದಾಗಿ ಕೋರ್ಟ್ ಹೇಳಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋದಿ ಟ್ರಾವೆಲ್ನ ಎಲ್ಲಾ ದಾಖಲೆಗಳನ್ನ ಸಂಗ್ರಹಿಸಿ ಸುರಕ್ಷಿತವಾಗಿಡಿ. ಅದಕ್ಕೆ ಬೇಕಾಗುವ ಸಹಕಾರ ಹಾಗೂ ಹೆಚ್ಚಿನ ಮಾಹಿತಿಗಳನ್ನು ಪಂಜಾಬ್ ಪೊಲೀಸರು ಮತ್ತು ಎಸ್ಪಿಜಿ ಘಟಕಗಳಿಂದ ಪಡೆದುಕೊಳ್ಳಿ ಎಂದು ಸುಪ್ರೀಂಕೋರ್ಟ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ಗೆ ತಿಳಿಸಿದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ