ಬಂಡೀಪುರದಲ್ಲಿ ಮೋದಿ ಸಫಾರಿ – ಪ್ರಕೃತಿ ಸೌಂದರ್ಯಕ್ಕೆ ಮಾರುಹೋದ ಪ್ರಧಾನಿ

Team Newsnap
1 Min Read
modi in safari

ಹುಲಿ ಯೋಜನೆಯ ಸುವರ್ಣ ಮಹೋತ್ಸವದ ನಿಮಿತ್ಯ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ‌ ಮೋದಿ ಭೇಟಿ ನೀಡಿ ಬಂಡೀಪುರ ಹುಲಿ‌ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದರು

ಮೈಸೂರಿನಿಂದ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳಾದ ಮುರುಳಿ, ಸುಬ್ರಮಣ್ಯ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ‌ ಡಿ.ಎಸ್. ರಮೇಶ್ ಅವರಿಂದ ಸ್ವಾಗತ ಕೋರಿದರು.

ಬೆಳಗ್ಗೆ 7:35ರ ವೇಳೆಗೆ ಬಂಡೀಪುರ ಕ್ಯಾಂಪಸ್‌ಗೆ ತಲುಪಿದ ಮೋದಿ ಅವರು ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ಅರಣ್ಯದ ಕಚ್ಚಾ ರಸ್ತೆಯಲ್ಲೇ ಸಾಗಿ ಬೆಳಗ್ಗೆ 9:50ಕ್ಕೆ ಕೆಕ್ಕನಹಳ್ಳ ಚೆಕ್ ಪೋಸ್ಟ್‌ಗೆ ಮೋದಿ ತಲುಪಿದರು.

ಅಲ್ಲಿಂದ ತಮ್ಮ ವಾಹನದಲ್ಲಿ ಹೆದ್ದಾರಿಯಲ್ಲೇ 5 ಕಿ.ಮೀ. ಸಾಗಿ ತಮಿಳುನಾಡಿನ ಮಧುಮಲೈ ಹುಲಿಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಮೋದಿ ತೆರಳಿದರು.

modi in safari 1

ಇಲ್ಲಿ ಆನೆಗಳಿಗೆ ಕಬ್ಬನ್ನು ತಿನ್ನಿಸಿದರು. ಏಷ್ಯಾದ ಪ್ರಥಮ ಆನೆ ಕ್ಯಾಂಪ್ ತೆಪ್ಪಕಾಡಿನಲ್ಲಿ ಮೋದಿ‌ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮ ಮತ್ತು ಬೆಳ್ಳಿ ದಂಪತಿಯನ್ನು ಭೇಟಿಯಾದ ಬಳಿಕ ನೀಲಗಿರಿಸ್ ಹೆಲಿಪ್ಯಾಡ್‌ನಿಂದ ಮೈಸೂರಿನತ್ತ ಹೊರಟರು. ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ರಿಲೀಸ್ : ಸಿಎಂ

ಪ್ರಧಾನಿ ಮೋದಿ ಅವರೊಂದಿಗೆ ದೆಹಲಿಯಿಂದ ಬಂದಿದ್ದ ಏಮ್ಸ್ ವೈದ್ಯರ ತಂಡ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮನಿ ಸಾಹು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ‌ ಇಲಾಖೆಯ ವೈದ್ಯರ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ‌ಇದ್ದರು. ಮೋದಿ ಅವರಿದ್ದ ವಾಹನದ ಜೊತೆಗೆ ಆಂಬುಲೆನ್ಸ್‌ ಸೇರಿದಂತೆ ಒಂಬತ್ತು ವಾಹನಗಳು ಸಾಗಿದ್ದವು.

Share This Article
Leave a comment