ಪ್ರಧಾನಿ ಕಾರ್ಯಕ್ರಮ ಭದ್ರತೆಗೆ ನಿಯೋಜಿಸಿದ್ದ PSI ಸುದರ್ಶನ್ ಶೆಟ್ಟಿ ಆತ್ಮಹತ್ಯೆ

Team Newsnap
1 Min Read

ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್‌ಐ ಸುದರ್ಶನ್ ಶೆಟ್ಟಿ (51) ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

WhatsApp Image 2022 06 20 at 11.02.47 AM
PM security assigned PSI Sudarshan Shetty committed suicide #thenewsnap #PSI #latestnews #sucide #shockingnews #modi

ಇದನ್ನು ಓದಿ –25 ವರ್ಷವಾದರೂ ಕನ್ಯೆ ಸಿಗದ ಕಾರಣ ರೈತ ಆತ್ಮಹತ್ಯೆ

ನುಮಂತನಗರ ಠಾಣೆ ಪಿಎಸ್‌ಐ ಆಗಿದ್ದ ಸುದರ್ಶನ್‌ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದಲ್ಲಿರುವ ಮನೆಯಲ್ಲಿ ಉಳಿದುಕೊಂಡಿದ್ದರು.’

ನಿನ್ನೆ ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರಿಗೆ ಮಗ ಶುಭಾಶಯ ತಿಳಿಸಿದ್ದರು. ಧನ್ಯವಾದ ತಿಳಿಸಿ ಮಗನ ಜೊತೆ ಕಾಲ ಕಳೆದಿದ್ದ ಸುದರ್ಶನ್, ಕೊಠಡಿಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದ. ಕೆಲ ಹೊತ್ತಿನ ನಂತರ ಹೊರಗೆ ಬಂದಿರಲಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Leave a comment