ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಪೋಕ್ಸೊ ( POCSO ) ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗಿದ್ದು ,ಅವರನ್ನು ಬಂಧಿಸಲು ಸಿಐಡಿ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.
ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನುರಹಿತ ವಾರೆಂಟ್ ಹೊರಡಿಸಬೇಕೆಂದು ಪೊಲೀಸರು ನಿನ್ನೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಇಂದು 42 ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ, ವಾರೆಂಟ್ ಜಾರಿ ಮಾಡಿದರೆ ಪೊಲೀಸರು ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸುತ್ತಾರೆ.
ಈಗಾಗಲೇ ಯಡಿಯೂರಪ್ಪ ತನಿಖೆಗೆ ಹಾಜರಾಗುವಂತೆ ಪೊಲೀಸರು ನೀಡಿದ್ದ ನೋಟೀಸ್‌ಗೆ ಉತ್ತರಿಸಿದ್ದು , ಕಳೆದ ಮಾ.28 ರಂದು ನೀಡಿದ್ದ ನೋಟೀಸ್‌ನಂತೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೆ. ಜೂ.12 ರಂದು ತಾವು ನೀಡಿರುವ ನೋಟೀಸ್ ನನಗೆ ನಿನ್ನೆಯಷ್ಟೇ ತಲುಪಿದೆ ಎಂದು ಹೇಳಿದ್ದಾರೆ.
ಪೂರ್ವ ನಿಗದಿತ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಈ ಬಾರಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಜೂ. 17 ರಂದು ನಾನು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ನಾನು ತನಿಖೆಗೆ ಸಹಕರಿಸಿದ್ದೇನೆ ,ಹೀಗಾಗಿ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದ್ದಾರೆ.
ಅಪ್ರಾಪ್ತ ಮಗಳೊಂದಿಗೆ ಬಿಎಸ್‌ವೈ ಅವರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕಳೆದ ಮಾರ್ಚ್‌ನಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದು, ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟರು.
ಬಿ.ಎಸ್.ಯಡಿಯೂರಪ್ಪ ಅವರಿಗೆ ,ಮಹಿಳೆಯ ದೂರಿಗೆ ಸಂಬಂಧಿಸಿದಂತೆ ನೋಟೀಸ್ ಜಾರಿಗೊಳಿಸಿದ್ದ ಪೊಲೀಸರು ನಿನ್ನೆ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಮತ್ತೊಂದೆಡೆ ಈ ಪ್ರಕರಣದ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್‌ಗೆ ಮನವಿ ಮಾಡಿದ್ದು ,ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟೀಸ್‌ಗೂ ಉತ್ತರ ನೀಡಿ ಜೂನ್ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ದುರ್ಮರಣ
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದ್ದು , ನ್ಯಾಯಾಧೀಶರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದರ ಮೇಲೆ ಯಡಿಯೂರಪ್ಪನವರ ಬಂಧನ ನಿರ್ಧಾರವಾಗಲಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ