crime

POCSO ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪ ಗೆ ಬಂಧನದ ಭೀತಿ

ಬೆಂಗಳೂರು : ಮಾಜಿ ಸಿಎಂ ಬಿ.ಎಸ್‌‍.ಯಡಿಯೂರಪ್ಪ ಅವರಿಗೆ ಪೋಕ್ಸೊ ( POCSO ) ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗಿದ್ದು ,ಅವರನ್ನು ಬಂಧಿಸಲು ಸಿಐಡಿ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನುರಹಿತ ವಾರೆಂಟ್‌ ಹೊರಡಿಸಬೇಕೆಂದು ಪೊಲೀಸರು ನಿನ್ನೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಇಂದು 42 ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ, ವಾರೆಂಟ್‌ ಜಾರಿ ಮಾಡಿದರೆ ಪೊಲೀಸರು ಬಿ.ಎಸ್‌‍.ಯಡಿಯೂರಪ್ಪ ಅವರನ್ನು ಬಂಧಿಸುತ್ತಾರೆ.

ಈಗಾಗಲೇ ಯಡಿಯೂರಪ್ಪ ತನಿಖೆಗೆ ಹಾಜರಾಗುವಂತೆ ಪೊಲೀಸರು ನೀಡಿದ್ದ ನೋಟೀಸ್‌‍ಗೆ ಉತ್ತರಿಸಿದ್ದು , ಕಳೆದ ಮಾ.28 ರಂದು ನೀಡಿದ್ದ ನೋಟೀಸ್‌‍ನಂತೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೆ. ಜೂ.12 ರಂದು ತಾವು ನೀಡಿರುವ ನೋಟೀಸ್‌‍ ನನಗೆ ನಿನ್ನೆಯಷ್ಟೇ ತಲುಪಿದೆ ಎಂದು ಹೇಳಿದ್ದಾರೆ.

ಪೂರ್ವ ನಿಗದಿತ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಈ ಬಾರಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಜೂ. 17 ರಂದು ನಾನು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ನಾನು ತನಿಖೆಗೆ ಸಹಕರಿಸಿದ್ದೇನೆ ,ಹೀಗಾಗಿ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದ್ದಾರೆ.

ಅಪ್ರಾಪ್ತ ಮಗಳೊಂದಿಗೆ ಬಿಎಸ್‌‍ವೈ ಅವರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕಳೆದ ಮಾರ್ಚ್‌ನಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದು, ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟರು.

ಬಿ.ಎಸ್‌‍.ಯಡಿಯೂರಪ್ಪ ಅವರಿಗೆ ,ಮಹಿಳೆಯ ದೂರಿಗೆ ಸಂಬಂಧಿಸಿದಂತೆ ನೋಟೀಸ್‌‍ ಜಾರಿಗೊಳಿಸಿದ್ದ ಪೊಲೀಸರು ನಿನ್ನೆ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಮತ್ತೊಂದೆಡೆ ಈ ಪ್ರಕರಣದ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್‌ಗೆ ಮನವಿ ಮಾಡಿದ್ದು ,ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟೀಸ್‌‍ಗೂ ಉತ್ತರ ನೀಡಿ ಜೂನ್‌ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ದುರ್ಮರಣ

ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದ್ದು , ನ್ಯಾಯಾಧೀಶರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದರ ಮೇಲೆ ಯಡಿಯೂರಪ್ಪನವರ ಬಂಧನ ನಿರ್ಧಾರವಾಗಲಿದೆ.

Team Newsnap
Leave a Comment

Recent Posts

ರಾಜ್ಯದಲ್ಲಿ 8 IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು :ರಾಜ್ಯ ಸರ್ಕಾರ ಎಂಟು ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ… Read More

July 7, 2024

ಕೆ ಆರ್ ಎಸ್ ಗೆ 102 ಅಡಿ:11 ಸಾವಿರ ಕ್ಯುಸೆಕ್ ಒಳಹರಿವು – ಕಬಿನಿಗೆ ಭರ್ತಿಗೆ 3ಅಡಿ ಬಾಕಿ

ಕೆಆರ್ ಎಸ್ ನೀರಿನ ಮಟ್ಟ 102.00ರ ಅಡಿ ಗಡಿದಾಟಿದೆ . ಕಬಿನಿ ಜಲಾಶಯದ ನೀರಿನ ಮಟ್ಟ2280.30 ಅಡಿ ಇದೆ ಭರ್ತಿಗೆ… Read More

July 7, 2024

ತಾತ್ಕಾಲಿಕವಾಗಿ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​ಗೆ ತಡೆ : ಚೆಲುವರ್ಯಸ್ವಾಮಿ

ಮಂಡ್ಯ : ಸಚಿವ ಚಲುವರಾಯಸ್ವಾಮಿ ತುರ್ತು ಸಭೆ ನಡೆಸಿದ್ದು, ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​ಗೆ ತಾತ್ಕಾಲಿಕ ತಡೆ ನೀಡಿದ್ದಾರೆ. ಸರ್ಕಾರ… Read More

July 6, 2024

ವಿದ್ಯಾರ್ಥಿ ಮೊಬೈಲ್ ಚಾರ್ಜ್ ಹಾಕಲು ಹೋಗಿ ದುರ್ಮರಣ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋಗಿ ಎಲೆಕ್ಟ್ರಿಕ್ ಶಾಕ್ ನಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.… Read More

July 6, 2024

“ಹೃದಯದ ಸ್ವಾಸ್ಥ್ಯ ಕಾಪಾಡುವ ಬಾಳೆ ಹೃದಯ”

"ಬಾಳೆಗೆ ಒಂದೇ ಗೊನೆ ರಾಗಿಗೆ ಒಂದೇ ತೆನೆ"! ಎಂಬ ಮಾತಿನಂತೆ ಬಾಳೆಯು ನಮ್ಮ ಬದುಕಿನುದ್ದಕ್ಕೂ ಒಂದಲ್ಲಾ ಒಂದು ರೀತಿಯಲ್ಲಿ ಸಂಬಂಧ… Read More

July 6, 2024

ನಾನೇ ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿ, ಅಧಿಕೃತ ಘೋಷಣೆ ಅಷ್ಟೇ ಬಾಕಿ : ಸಿ.ಪಿ.ಯೋಗೇಶ್ವರ್

ರಾಮನಗರ : ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ , ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿ , ನಾನು ಸ್ಪರ್ಧಿಸುವಂತೆ ಹೆಚ್.ಡಿ.ಕುಮಾರಸ್ವಾಮಿ… Read More

July 5, 2024