ವಿಷಯಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಇಸಾಮುದ್ರ ಲಂಬಾಣಿಹಟ್ಟಿ ಗ್ರಾಮದಲ್ಲಿ ನಡೆದಿದೆ.
ಸೋಮವಾರ ರಾತ್ರಿ 10 ಗಂಟೆಯ ಸಮಯದಲ್ಲಿ ಮುದ್ದೆ ಸೇವಿಸಿರುವ ತಿಪ್ಪನಾಯ್ಕ (45), ಗುಂಡಿಬಾಯಿ (80) ಸುಧಾಬಾಯಿ (40) ಮೃತಪಟ್ಟರು.
ರಾಹುಲ್ (19) ಮತ್ತು ರಮ್ಯಾ (16)ರವರ ಸ್ಥಿತಿ ಗಂಭೀರವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಟುಂಬದ ಸದಸ್ಯರೆಲ್ಲರೂ ಊಟ ಮಾಡಿ ಮಲಗಿದ ಬಳಿಕ ರಾತ್ರಿ ಸುಮಾರು 11:30ಕ್ಕೆ ವಾಂತಿ ಮಾಡಿಕೊಂಡಿದ್ದಾರೆ.
ನೆರೆಹೊರೆಯವರು ತಕ್ಷಣ ಇವರನ್ನು ಭರಮಸಾಗರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆದರೆ ಮಾರ್ಗ ಮಧ್ಯದಲ್ಲಿ ಗುಂಡಿಬಾಯಿ ಮತ್ತು ಸುಧಾಬಾಯಿ ಮೃತಪಟ್ಟಿದ್ದಾರೆ. ತಿಪ್ಪನಾಯ್ಕ ದಾವಣಗೆರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
More Stories
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ನಗದು ರಹಿತ ಚಿಕಿತ್ಸೆಗೆ ‘ಆರೋಗ್ಯ ಸಂಜೀವಿನಿ’ ಯೋಜನೆ ಜಾರಿ!