ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಂಡ್ಯದಲ್ಲಿ ನಡೆಯುತ್ತಿರುವ ʼಭಾರತ್ ಜೋಡೋ ಪಾದಯಾತ್ರೆʼ ವರದಿ ಮಾಡುತ್ತಿದ್ದ ಪತ್ರಕರ್ತರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ.
ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ವರದಿ ಮಾಡುತ್ತಿದ್ದಾಗ ವರದಿಗಾರರು, ಕ್ಯಾಮೆರಾಮ್ಯಾನ್ ಮೇಲೆ ಮಂಡ್ಯ ಜಿಲ್ಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ.ಇದನ್ನು ಓದಿ –PFI ನಿಷೇಧ – ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಧಿಕರಣ ರಚನೆ
ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ. ಪೊಲೀಸರ ಗೂಂಡಾವರ್ತನೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಖಂಡನೆ ವ್ಯಕ್ತಪಡಿಸಿದ್ದಾರೆ.
ಹಲ್ಲೆ ಬಗ್ಗೆ ಮಂಡ್ಯ ಎಸ್‌ಪಿ ಯತೀಶ್ ಮಾತನಾಡಿ, ನೂಕಾಟದ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ನಮ್ಮ ಪೊಲೀಸರು ಬಿದ್ದಿದ್ದಾರೆ. ಈ ವೇಳೆ ನಾನು ಕೂಡ ಕೆಳಗೆ ಬಿದ್ದು, ಯೂನಿಫಾರ್ಮ್‌ನಲ್ಲಿದ್ದ ಹೆಸರಿನ ಪ್ಲೇಟ್ ಕೂಡ ಹರಿದಿದೆ. ನಮ್ಮ ಪೊಲೀಸರು ಹಲ್ಲೆ ನಡೆಸಿಲ್ಲ. ಸಾರ್ವಜನಿಕ ಸೇವೆ ಮಾಡುತ್ತಿರುವ ಪೊಲೀಸರು, ಪತ್ರಕರ್ತರು ಪರಸ್ಪರ ಸಹಕಾರದಿಂದಲೇ ಪಾದಯಾತ್ರೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದೇವೆ ಎಂದರು
ಪೊಲೀಸರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದರೆ, ವೀಡಿಯೋಗಳಿದ್ದರೆ ಸಾಕ್ಷಿಯನ್ನು ಪರಿಗಣಿಸಿ ಸಂಬಂಧಿತ ಅಧಿಕಾರಿ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.
ಈ ಘಟನೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ ಹಲ್ಲೆ ವಿಚಾರ ತಿಳಿದಿಲ್ಲ. ಸಂಬಂಧಪಟ್ಟವರಿಂದ ವಿವರಗಳನ್ನು ತರಿಸಿಕೊಂಡು ಪರಿಶೀಲಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
- ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ