ಮಂಡ್ಯದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಪೋಲಿಸರು: ತಪ್ಪಿತಸ್ಥರ ವಿರುದ್ಧ ಕ್ರಮ – ಸಿಎಂ

Team Newsnap
1 Min Read
Police assaulting journalists in Mandya: Action against culprits - CM ಮಂಡ್ಯದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಪೋಲಿಸರು: ತಪ್ಪಿತಸ್ಥರ ವಿರುದ್ಧ ಕ್ರಮ - ಸಿಎಂ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಂಡ್ಯದಲ್ಲಿ ನಡೆಯುತ್ತಿರುವ ʼಭಾರತ್‌ ಜೋಡೋ ಪಾದಯಾತ್ರೆʼ ವರದಿ ಮಾಡುತ್ತಿದ್ದ ಪತ್ರಕರ್ತರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ.

ಭಾರತ್‌ ಜೋಡೋ ಯಾತ್ರೆಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ವರದಿ ಮಾಡುತ್ತಿದ್ದಾಗ ವರದಿಗಾರರು, ಕ್ಯಾಮೆರಾಮ್ಯಾನ್‌ ಮೇಲೆ ಮಂಡ್ಯ ಜಿಲ್ಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ.ಇದನ್ನು ಓದಿ –PFI ನಿಷೇಧ – ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಧಿಕರಣ ರಚನೆ

ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ. ಪೊಲೀಸರ ಗೂಂಡಾವರ್ತನೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಖಂಡನೆ ವ್ಯಕ್ತಪಡಿಸಿದ್ದಾರೆ.

ಹಲ್ಲೆ ಬಗ್ಗೆ ಮಂಡ್ಯ ಎಸ್‌ಪಿ ಯತೀಶ್ ಮಾತನಾಡಿ, ನೂಕಾಟದ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ನಮ್ಮ ಪೊಲೀಸರು ಬಿದ್ದಿದ್ದಾರೆ. ಈ ವೇಳೆ ನಾನು ಕೂಡ ಕೆಳಗೆ ಬಿದ್ದು, ಯೂನಿಫಾರ್ಮ್‌ನಲ್ಲಿದ್ದ ಹೆಸರಿನ ಪ್ಲೇಟ್‌ ಕೂಡ ಹರಿದಿದೆ. ನಮ್ಮ ಪೊಲೀಸರು ಹಲ್ಲೆ ನಡೆಸಿಲ್ಲ. ಸಾರ್ವಜನಿಕ ಸೇವೆ ಮಾಡುತ್ತಿರುವ ಪೊಲೀಸರು, ಪತ್ರಕರ್ತರು ಪರಸ್ಪರ ಸಹಕಾರದಿಂದಲೇ ಪಾದಯಾತ್ರೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದೇವೆ ಎಂದರು

ಪೊಲೀಸರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದರೆ, ವೀಡಿಯೋಗಳಿದ್ದರೆ ಸಾಕ್ಷಿಯನ್ನು ಪರಿಗಣಿಸಿ ಸಂಬಂಧಿತ ಅಧಿಕಾರಿ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.

ಈ ಘಟನೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ ಹಲ್ಲೆ ವಿಚಾರ ತಿಳಿದಿಲ್ಲ. ಸಂಬಂಧಪಟ್ಟವರಿಂದ ವಿವರಗಳನ್ನು ತರಿಸಿಕೊಂಡು ಪರಿಶೀಲಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Share This Article
Leave a comment