ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ನಿವಾಸದ ಮೇಲೆ ಶುಕ್ರವಾರ ಬೆಳಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಡೀಲಿಂಗ್ ಪ್ರಕರಣ ಸಂಬಂಧ ಗೋವಿಂದಪುರ ಪೊಲೀಸರು ಸಂಜಯ್ ನಗರದಲ್ಲಿರುವ ಮಸ್ತಾನ್ ಮನೆ ಮೇಲೆ ದಾಳಿ ನಡೆಸಿದರು.
ಈ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಇಬ್ಬರು ಉದ್ಯಮಿಗಳು ಅಪಾರ್ಟ್‍ಮೆಂಟ್ ವೊಂದರಲ್ಲಿ ಸಿಕ್ಕಿಬಿದ್ದಿದ್ದರು
ಈ ಸಂಬಂಧ ಪೊಲೀಸರು ತನಿಖೆ ನಡೆಸಿದ್ದರು. ಇದೀಗ ಮುಂದುವರಿದ ಭಾಗವಾಗಿ ಕೋರ್ಟಿನಿಂದ ಸರ್ಚ್ ವಾರೆಂಟ್ ಪಡೆದು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿರುವ ನೈಜಿರಿಯನ್ ಡ್ರಗ್ಸ್ ಪೆಡ್ಲರ್ ಮಾಹಿತಿ ಆಧಾರದ ಮೇಲೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ವಿದೇಶಿ ಡ್ರಗ್ಸ್ ಪೆಡ್ಲರ್ ಗಳಿಂದ ಮಸ್ತಾನ್ ನಿರಂತರವಾಗಿ ವಿವಿಧ ರೀತಿಯ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದ ಎನ್ನಲಾಗಿತ್ತು.
ಗೋವಿಂದಪುರ ಪೊಲೀಸರು ಇತ್ತೀಚೆಗಷ್ಟೆ ಪ್ರಮುಖ ವಿದೇಶಿ ಡ್ರಗ್ಸ್ ಪೆಡ್ಲರ್ ನನ್ನು ಬಂಧಿಸಿದ್ದರು. ಮಸ್ತಾನ್ ಸ್ನೇಹಿತ ಕೇಶವ್ ಅನ್ನೋರ ಮನೆ ಮೇಲೂ ದಾಳಿ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ