- ಕಡ್ಡಾಯ ನಿಯಮಗಳ ಪಾಲನೆ ಅಗತ್ಯ
ಮೈಸೂರು: ಡಿಸೆಂಬರ್ 31ರ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸ್ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಪೊಲೀಸ್ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಮೈಸೂರು ನಗರ ಪೊಲೀಸ್ ಆಯುಕ್ತರು ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ಸೇರಿದಂತೆ ಸಾರ್ವಜನಿಕರ ಸುರಕ್ಷತೆಗೆ ವಿವಿಧ ಕ್ರಮಗಳನ್ನು ಕೈಗೊಂಡಿದ್ದು, ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ವಿಶೇಷ ಆದ್ಯತೆ ನೀಡಲಾಗಿದೆ.
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಜಾರಿ ಮಾಡಲಾದ ನಿಯಮಗಳು:
- ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ಮಾಡಬಾರದು. ಇದಕ್ಕಾಗಿ ಠಾಣಾವಾರು ವಿಶೇಷ ಕಾರ್ಯಪಡೆಗಳನ್ನು ರಚಿಸಲಾಗಿದೆ.
- ಮಹಿಳೆಯರ ರಕ್ಷಣೆಗಾಗಿ ವಿಶೇಷ ಪಿಂಕ್ ಗರುಡಾ ಪಡೆ (ಚಾಮುಂಡೆ ಪಡೆ) ಗಸ್ತು ನಿಯೋಜನೆ.
- ಯಾವುದೇ ಅಹಿತಕರ ಘಟನೆಗೆ ತಕ್ಷಣ ಸ್ಪಂದಿಸಲು ಶ್ವಾನದಳ ಮತ್ತು ವಿದ್ವಂಸಕ ಕೃತ್ಯ ತಡೆ ತಂಡ ಸಜ್ಜಾಗಿದೆ.
- ಪ್ರವಾಸಿ ತಾಣಗಳಲ್ಲಿ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ.
- ವೀಲೀಂಗ್ ಮತ್ತು ಡ್ರಾಗ್ ರೇಸ್‌ಗಳ ತಡೆಯಿಗೆ ಸಂಚಾರ ಪೊಲೀಸ್ ತಂಡ ಸಜ್ಜಾಗಿದೆ.
- ಅತಿವೇಗದ ವಾಹನ ಚಾಲನೆ ನಿಯಂತ್ರಣಕ್ಕೆ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗುತ್ತದೆ. 112 ಮತ್ತು ಹೆದ್ದಾರಿ ಪೆಟ್ರೋಲ್ ವಾಹನಗಳ ನಿಯೋಜನೆ.
- ಹೋಟೆಲ್, ರೆಸ್ಟೋರೆಂಟ್, ಕ್ಲಬ್‌ಗಳಲ್ಲಿ ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅನುಮತಿ.
ಇದನ್ನು ಓದಿ –KSDL ನೌಕರ ಕೈಯಲ್ಲಿ ಡೆತ್ ನೋಟ್ ಹಿಡಿದು ಆತ್ಮಹತ್ಯೆ: ಕೆಲಸದ ಒತ್ತಡವೇ ಕಾರಣ?
ಮೈಸೂರು ನಗರ ಪೊಲೀಸ್ ಆಯುಕ್ತರ ಈ ಮಾರ್ಗಸೂಚಿಗಳು ಹೊಸ ವರ್ಷಾಚರಣೆಯ ವೇಳೆ ಸಾರ್ವಜನಿಕರ ಶಿಸ್ತಿಗೆ ಪೂರಕವಾಗಿದ್ದು, ಹಿತಕರ ವಾತಾವರಣದಲ್ಲಿ ಆಚರಣೆಗೆ ಸಹಾಯವಾಗಲಿವೆ.
More Stories
₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ