ಬೆಂಗಳೂರಿನ ಗೋವಿಂದಪುರ ಡ್ರಗ್ಸ್ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಳಗ್ಗೆ ಪೊಲೀಸರು ಹಲವು ಸೆಲಿಬ್ರಿಟಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್, ಸೆಲೆಬ್ರಿಟಿ ಸೋನಿಯಾ ಅಗರ್ ವಾಲ್ ಮನೆ ಮೇಲೆ ಪೂರ್ವ ವಿಭಾಗದ ಪೊಲೀಸರು ದಾಳಿ ಮಾಡಿದ್ದಾರೆ.
ರಾಜಾಜಿನಗರ, ಪದ್ಮನಾಭನಗರದ, ಬೆನ್ಸೆನ್ ಟೌನ್ನಲ್ಲಿರುವ ಮನೆಗಳ ಮೇಲೆ ಈ ದಾಳಿ ನಡೆದಿದೆ.
ಈ ಹಿಂದೆ ಡ್ರಗ್ ಪೆಡ್ಲರ್ ಥಾಮಸ್ ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಇದೆ.
ಸೆಲೆಬ್ರಿಟಿಗಳ ಮನೆಯಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ದಾಳಿ ವೇಳೆ ಡ್ರಗ್ಸ್ ಪತ್ತೆಯಾಗಿರುವ ಶಂಕೆಯೂ ಇದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ