ಶ್ರೀರಂಗಪಟ್ಟಣದಲ್ಲಿ ಪತ್ರಕರ್ತರ ಮೇಲೆ ಪೊಲೀಸರ ದರ್ಪ : ಮೈಸೂರು – ಬೆಳ್ತಂಗಡಿಯಲ್ಲಿ ಕಾರ್ಯಕರ್ತರ ಗಲಾಟೆ

Team Newsnap
1 Min Read

ಶ್ರೀರಂಗಪಟ್ಟಣದಲ್ಲಿ ಪತ್ರಕರ್ತರ ಮೇಲೆ ಪೊಲೀಸರು ದರ್ಪ ತೋರಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ನಾಮಪತ್ರ ಸಲ್ಲಿಕೆ ವೇಳೆ ಪೊಲೀಸರು ಗೂಂಡಾಗಿರಿ ವರ್ತನೆ ನಡೆಸಿದ್ದಾರೆ.

ಚುನಾವಣಾ ಕಚೇರಿಯಿಂದ ಹೊರಬರುವಾಗ ಮಾಧ್ಯಮ ಪ್ತತಿನಿಧಿಗಳನ್ನು ತಳ್ಳಿದ ಪೊಲೀಸರು ಗೂಂಡಾವರ್ತನೆ ತೋರಿಸಿದ್ದಾರೆ.

ಮೈಸೂರಿನಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ :

ಮೈಸೂರು ಜಿಲ್ಲೆಯಹೆಚ್ ಡಿ ಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ, ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಪೊಲೀಸರಿಂದ ಲಾಠಿಚಾರ್ಜ್ ನಡೆಸಿ ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಬೆಳ್ತಂಗಡಿಯಲ್ಲೂ ಗಲಾಟೆ

ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಬಿಜೆಪಿ ಕಾಂಗ್ರೆಸ್ ನಾಮಪತ್ರ ಸಲ್ಲಿಕೆಯ ವೇಳೆ ಸಂಘರ್ಷ ಉಂಟಾಗಿದೆ, ರ್ಯಾಲಿ ವೇಳೆಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಪರಸ್ಪರ ಫೋಷಣೆ ಕೂಗಿ ಗಲಾಟೆ ನಡೆಯಿತು.ಇಂದು ಬೆಳಗ್ಗೆ ಕುತ್ಯಾರು ದೇವಸ್ಥಾನದಿಂದ ಬಿಜೆಪಿಯ ಅಭ್ಯರ್ಥಿ ಹರೀಶ್ ಪೂಂಜಾ ತಂಡ ಬೃಹತ್ ಮೆರವಣಿಯೊಂದಿಗೆ ಮಿನಿ ವಿಧಾನಸೌಧಕ್ಕೆ ಸಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆನಂತರ ಬಿಜೆಪಿ ಕಾರ್ಯಕರ್ತರು ತಮ್ಮ ತಮ್ಮ ಮನೆಗೆ ಹಿಂತಿರುಗುತ್ತಿದ್ದರು.

ಅಷ್ಟರಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಮತ್ತು ಇತರ ಮುಖಂಡರುಗಳು ನಾಮಪತ್ರ ಸಲ್ಲಿಕೆ ಮಾಡಲು .ಕಿನ್ಯಮ್ಮ ಯಾನೆ ಸಭಾಂಗಣದಿಂದ ಶುರುವಾಗಿತ್ತು ಮಾರ್ಗಮಧ್ಯೆ, ಮಾಜಿ ಶಾಸಕ ವಸಂತ ಬಂಗೇರ ಅವರ ಮನೆಯ ಮುಂದಿನ ರಸ್ತೆಯಲ್ಲಿ ಬಿಜೆಪಿ & ಕಾಂಗ್ರೆಸ್ ಕಾರ್ಯಕರ್ತರು ವಾಹನಗಳ ಮೂಲಕ ಸಾಗುತ್ತಿದ್ದರು.

ಆಗ ಪರಸ್ಪರ ಘೋಷಣೆಗಳು ಕೂಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರು ಸಾಗುತ್ತಿದ್ದ ವಾಹನಕ್ಕೆ ಹಾನಿ, ಬಿಜೆಪಿ ಕಾರ್ಯಕರ್ತ ಕಾರಿನ ಗಾಜು ಪುಡಿಪುಡಿ ಮಾಡಲಾಗಿದೆ ಎಂದು ವರದಿಯಾಗಿದೆ.ಸ್ವಾಭಿಮಾನಕ್ಕೆ ಧಕ್ಕೆಯಾದವರು ಕಾಂಗ್ರೆಸ್‌ಗೆ ಸೇರ್ತಾರೆ : ಡಿಕೆಶಿ

Share This Article
Leave a comment