ಸಭೆ, ಸದನ ಬಿಟ್ಟರೆ ಬೇರೆ ಯಾವುದೇ ಸಂದರ್ಭದಲ್ಲಿ ನಾನು ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿಲ್ಲ. ಉಳಿದ ಸಮಯದಲ್ಲಿ ನಾನು ಅವರನ್ನು ಭೇಟಿ ಮಾಡಿದ್ದನ್ನು ಸಾಬೀತು ಮಾಡಿದರೆ ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಕಲಬುರಗಿಯಲ್ಲಿಸುದ್ದಿಗಾರರ ಜೊತೆ ಮಾತನಾಡಿದ ಸಿದ್ದು ಯಡಿಯೂರಪ್ಪ ಅವರನ್ನು ಹುಟ್ಟು ಹಬ್ಬದ ಸಂದರ್ಭದಲ್ಲಿ ಭೇಟಿ ಮಾಡಿದ್ದೆ. ನಂತರ ಅವರನ್ನು ಭೇಟಿ ಮಾಡಿಲ್ಲ. ಭೇಟಿ ಮಾಡೋದು ಅದೇ ಕುಮಾರಸ್ವಾಮಿ ಎಂದು ನೇರವಾಗಿ ಅರೋಪಿಸಿದ್ದಾರೆ.
ಅಧಿಕಾರಕ್ಕಾಗಿ ರಾಜಕೀಯ ಮಾಡಬಾರದು. ಕುಮಾರಸ್ವಾಮಿ ಬಿಜೆಪಿ ಜೊತೆ ಹೋಗಿದ್ದರು. ಅದು ಏನು ಆವಾಗ ಕುಮಾರಸ್ವಾಮಿ ಸನ್ಯಾಸಿ ಆಗಲಿಕ್ಕೆ ಹೋಗಿದ್ರಾ,? ಪಕ್ಷದ ಹೆಸರು ಜೆಡಿಎಸ್, ಸರ್ಕಾರ ಮಾಡಿದ್ದು, ಕೋಮುವಾದಿ ಬಿಜೆಪಿ ಅವರ ಬಳಿ ಸನ್ಯಾಸತ್ವ ತೆಗೆದುಕೊಳ್ಳಲಿಕ್ಕೆ ಹೋಗಿದ್ದರೆ ಎಂದು ಅವರು ಅಂತಹವರಿಂದ ಪಾಠ ಕಲಿಬೇಕಾಗಿ ಬಂದಿರೋದು ನಮ್ಮ ದುಸ್ಥಿತಿ ಎಂದು ಮರುಗಿದರು.
ಯಡಿಯೂರಪ್ಪ ಆಪ್ತರ ಮೇಲಿನ ಐಟಿ ದಾಳಿ ಬಗ್ಗೆ ಪ್ರತಿಕ್ರಿಯಿಸಿ, ಪ್ರಧಾನಮಂತ್ರಿಗಳು ಬಿಜೆಪಿಯವರು. ಅವರು ನನ್ನ ಮಾತು ಕೇಳಿ ರೈಡ್ ಮಾಡ್ತಾರಾ? ಎಂದು ಮರುಪ್ರಶ್ನಿಸಿದರು.
ಈ ಹಿಂದೆ ನಾನು ತಾಲೂಕು ಬೋರ್ಡ್ ಸದಸ್ಯ ಆಗಿದ್ದಾಗಲೇ ವಿರೋಧ ಪಕ್ಷದ ನಾಯಕನಾಗಿದ್ದೆ. ಆಗಲು ಕೂಡಾ ಅಧಿಕಾರದಲ್ಲಿದ್ದವರನ್ನು ಭೇಟಿ ಮಾಡುತ್ತಿರಲಿಲ್ಲ. ಇದು ರಾಜಕೀಯದಲ್ಲಿ ನನ್ನ ತತ್ವ ಸಿದ್ದಾಂತ ಎಂದಿದ್ದಾರೆ.
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
More Stories
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ