ಹಿಂದೂ ದೇವಸ್ಥಾನಗಳ ತೆರವು ಸಂಬಂಧ ಅಧಿಕಾರಿಗಳು ಮಾಡಿರುವ ತಪ್ಪನ್ನು ರಾಜಕಾರಣಿಗಳು ಸುಮ್ಮನೆ ತಮ್ಮ ಮೇಲೆ ಎಳೆದುಕೊಳ್ಳುವುದು ಬೇಡ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ.
ಮೈಸೂರಿನಲ್ಲಿ ಇಂದು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ,2018 ರ ಫೆಬ್ರವರಿ 6 ರಂದು ದೇವಸ್ಥಾನ ತೆರವು ವಿಚಾರದಲ್ಲಿ ಅಂತಿಮ ಆದೇಶ ಬಂದಿದೆ. ಈ ಆದೇಶವನ್ನು ನಿಮಗೂ(ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ) ಐಎಎಸ್ ಅಧಿಕಾರಿಗಳು ಸರಿಯಾಗಿ ವಿವರಿಸಿಲ್ಲ.
ಬಿಜೆಪಿ ಸರ್ಕಾರದ ಅವಧಿಯಲ್ಲೂ ಅಧಿಕಾರಿಗಳು ತಪ್ಪುಮಾಡಿದರು. ಈ ಅಧಿಕಾರಿಗಳು ಸರ್ಕಾರಕ್ಕೆ ಸರಿಯಾದ ವಿವರಣೆ ನೀಡುತ್ತಿಲ್ಲ. ಇದು ಅಧಿಕಾರಿಗಳು ಮಾಡಿರುವ ತಪ್ಪು ಎಂದು ದೂರಿದರು.
ಹಿಂದೂ ದೇವಸ್ಥಾನಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರೀತಿ ಇದ್ದಿದ್ದರೆ ಅವರ ಆಡಳಿತದಲ್ಲಿ ಇದಕ್ಕೆ ಸಂಬಂಧಿಸಿದ ತಪ್ಪು ತಿದ್ದಬಹುದಿತ್ತು. 8 ವಾರದಲ್ಲಿ ವರದಿ ನೀಡಲು ಕೋರ್ಟ್ ಗಡುವು ನೀಡಿತ್ತು. ಆದರೆ ಸಿದ್ದರಾಮಯ್ಯ ಆ ಕೆಲಸ ಮಾಡಲಿಲ್ಲ ಎಂದು ಆಕ್ಷೇಪಿಸಿದರು.
ದೇವಸ್ಥಾನ ಉಳಿಸಿಕೊಳ್ಳಲು ಯಾವ ಪ್ರಯತ್ನವನ್ನು ತಮ್ಮ ಆಡಳಿತದಲ್ಲಿ ಮಾಡಲಿಲ್ಲ. ದೇವಸ್ಥಾನದ ಮೇಲೆ ಪ್ರೀತಿ ಇದ್ದಿದ್ದರೆ ವಿಗ್ರಹ ಭಂಜಕ ಟಿಪ್ಪು ಜಯಂತಿಯನ್ನು ಸಿದ್ದರಾಮಯ್ಯ ಮಾಡುತ್ತಿರಲಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದರು. ಎರಡೂ ಸರ್ಕಾರದಿಂದಲೂ ತಪ್ಪು ಆಗಿದೆ. ಅಧಿಕಾರಿಗಳು ಮಾಡಿರುವ ತಪ್ಪನ್ನು ಯಾವ ಸರ್ಕಾರವೂ ಸರಿಯಾಗಿ ಗಮನಿಸಿಲ್ಲ ಎಂದರು.
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
More Stories
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!