ವೆಸ್ಟ್ ಇಂಡೀಸ್ ಆಲ್ರೌಂಡರ್, ಮಾಜಿ ಕ್ಯಾಪ್ಟನ್ ಕೀರನ್ ಪೋಲಾರ್ಡ್ ಬುಧವಾರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಐಪಿಎಲ್ ಸೇರಿದಂತೆ ವಿವಿಧ ಲೀಗ್ಗಳಲ್ಲಿ ಆಡುವುದಾಗಿ ಹೇಳಿರುವ ಪೋಲಾರ್ಡ್(34), ತಮ್ಮ ರಿಟೈರ್ಮೆಂಟ್ ನಿರ್ಧಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಮೂಲಕ ಪ್ರಕಟಿಸಿದ್ದಾರೆ.
2007ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದ ಮೂಲಕ, ಪೋಲಾರ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು
15 ವರ್ಷಗಳ ಕ್ರಿಕೆಟ್ ಜರ್ನಿಯಲ್ಲಿ ಪೋಲಾರ್ಡ್ 123 ಏಕದಿನ ಹಾಗೂ 101 ಟಿ-20 ಪಂದ್ಯಗಳನ್ನಾಡಿದ್ದಾರೆ.
ಏಕದಿನ ಮಾದರಿಯಲ್ಲಿ 113 ಇನ್ನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರೋ ಪೋಲಾರ್ಡ್, 26.02ರ ಸರಾಸರಿಯಲ್ಲಿ 2706 ರನ್ ಗಳಿಸಿದ್ದಾರೆ.
ಇದರಲ್ಲಿ ಮೂರು ಶತಕ ಹಾಗೂ 13 ಅರ್ಧಶತಕ ಸೇರಿವೆ. ಬೌಲಿಂಗ್ನಲ್ಲಿ 55 ವಿಕೆಟ್ ಉರುಳಿಸಿದ್ದಾರೆ. ಟಿ-20 ಮಾದರಿಯಲ್ಲಿ ಪೋಲಾರ್ಡ್, 83 ಇನ್ನಿಂಗ್ಸ್ಗಳಿಂದ 135.14ರ ಸರಾಸರಿಯಲ್ಲಿ 1569 ರನ್ ಸಿಡಿಸಿದ್ದಾರೆ. ಬೌಲಿಂಗ್ನಲ್ಲಿ 42 ವಿಕೆಟ್ ಪಡೆದಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ