ಬೆಂಗಳೂರಿನಿಂದ ಮೈಸೂರು ಮತ್ತು ಮಂಗಳೂರಿನಂತಾದ ದಕ್ಷಿಣ ಭಾರತದ ಮಹಾನಗರಗಳಲ್ಲಿ ಮಾಲಿನ್ಯ ಪ್ರಮಾಣವು ಹೆಚ್ಚಾಗಿದೆ ಎಂಬ ವರದಿಯ ಆಧಾರದಲ್ಲಿ, ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೋಟಿಸ್ ನೀಡಿದೆ.
ಗ್ರೀನ್‌ಪೀಸ್ ಸಂಸ್ಥೆಯ ವರದಿ ಅಧರಿತ ಈ ಪ್ರಕರಣದಲ್ಲಿ, NGT ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ, ನ್ಯಾಯಮೂರ್ತಿ ಅರುಣ್ ಕುಮಾರ್ ತ್ಯಾಗಿ ಮತ್ತು ಡಾ. ಸೆಂಥಿಲ್‌ವೆಲ್ ಅವರ ನೇತೃತ್ವದಲ್ಲಿ ನ್ಯಾಯಪೀಠವು ಕೇಂದ್ರ ಅರಣ್ಯ, ಪರಿಸರ ಮತ್ತು ತಾಪಮಾನ ಬದಲಾವಣೆ ಸಚಿವಾಲಯ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಮತ್ತು ತೆಲಂಗಾಣ, ಆಂಧ್ರ ಪ್ರದೇಶ, ಕೇರಳ ಹಾಗೂ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಪ್ರತಿವಾದಿಗಳಾಗಿ ಆಯ್ಕೆ ಮಾಡಲಾಗಿದೆ.
ಗ್ರೀನ್‌ಪೀಸ್ ಸಂಸ್ಥೆಯು ಹೈದರಾಬಾದ್, ಚೆನ್ನೈ, ಕೊಚ್ಚಿ, ಮಂಗಳೂರು, ಅಮರಾವತಿ, ವಿಜಯವಾಡ, ವಿಶಾಖಪಟ್ಟಣ, ಬೆಂಗಳೂರು, ಮೈಸೂರು ಮತ್ತು ಪುಡುಚೇರಿ ನಗರಗಳಲ್ಲಿ ಮಾಲಿನ್ಯ ಪ್ರಮಾಣದ ಅಧ್ಯಯನ ನಡೆಸಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳ ನಡುವಿನ ಅಂತರವನ್ನು ಗಮನಿಸಿದಾಗ, ಬೆಂಗಳೂರು, ಮೈಸೂರು ಮತ್ತು ಮಂಗಳೂರು ನಗರಗಳಲ್ಲಿ ಮಾಲಿನ್ಯ ಪ್ರಮಾಣವು ಐದು ಪಟ್ಟು ಹೆಚ್ಚಾಗಿದ್ದು , ಇದರಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ವರದಿ ಸೂಚಿಸಿದೆ.ಗೃಹಲಕ್ಷ್ಮಿ ಯೋಜನೆಯ 2 ಕಂತಿನ ಹಣವು ಶೀಘ್ರದಲ್ಲೇ ಜಮೆ: ಲಕ್ಷ್ಮಿ ಹೆಬ್ಬಾಳ್ಕರ್
ಈ ಪ್ರಕರಣದಲ್ಲಿ ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆ 1981 ಮತ್ತು ಪರಿಸರ ಸಂರಕ್ಷಣಾ ಕಾಯ್ದೆ 1986ರ ನಿಯಮಗಳು ಉಲ್ಲಂಘನೆಗೊಂಡಿರುವುದಾಗಿ NGT ಅಭಿಪ್ರಾಯಪಟ್ಟಿದೆ.
More Stories
₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ