ಉತ್ತರ ಪ್ರದೇಶದ ಕಾಂಗ್ರೆಸ್ ಉಪಾಧ್ಯಕ್ಷೆ ಪ್ರಿಯಾಂಕಾ ಮೌರ್ಯ ಮತ್ತು ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಸೋದರ ಮಾವ, ಸಮಾಜವಾದಿ ಪಕ್ಷದ ಮಾಜಿ ಶಾಸಕ ಪ್ರಮೋದ್ ಗುಪ್ತಾ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ವಿಧಾನಸಭಾ ಚುನಾವಣೆಯಲ್ಲಿ ನಾನು ಹುಡುಗಿ ಹೋರಾಡಬಲ್ಲೇ ಪೋಸ್ಟರ್ ಗರ್ಲ್ ಪ್ರಿಯಾಂಕಾ ಮೌರ್ಯಗೆ ಕಾಂಗ್ರೆಸ್ಸಿನಿಂದ ಟಿಕೆಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಅವರು ಬಿಜೆಪಿ ಸೇರಿದ್ದಾರೆ.
ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ಕುರಿತು ಪ್ರತಿಕ್ರಿಯಿಸಿರುವ ಅವರು, ಲಂಚ ನೀಡಲು ಒಪ್ಪದ ಕಾರಣ ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡಿಲ್ಲ. ಅಲ್ಲದೆ ಒಂದು ತಿಂಗಳ ಹಿಂದೆ ಕಾಂಗ್ರೆಸ್‍ಗೆ ಸೇರಿರುವ ವ್ಯಕ್ತಿಯೊಬ್ಬರಿಗೆ ಪಕ್ಷ ಟಿಕೆಟ್ ನೀಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.
ಪಕ್ಷದ ಪ್ರಚಾರಕ್ಕಾಗಿ ನನ್ನನ್ನು ಹಾಗೂ ನನ್ನನ್ನು ಸೋಶಿಯಲ್ ಮೀಡಿಯಾದಲ್ಲಿ ಫಾಲೋ ಮಾಡುವ 10 ಲಕ್ಷ ಮಂದಿಯನ್ನು ಬಳಕೆ ಮಾಡಿಕೊಂಡಿದೆ. ಆದರೆ ಇದೀಗ ಟಿಕೆಟ್ ನೀಡಲು ಮಾತ್ರ ಪಕ್ಷ ಹಿಂದೇಟು ಹಾಕಿದೆ. ಇದು ಪಕ್ಷ ನನಗೆ ಮಾಡಿರುವ ಅನ್ಯಾಯವಾಗಿದೆ ಎಂದರು
ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಅಸಮಾಧಾನಗೊಳ್ಳುತ್ತಿರುವವರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಜಿಗಿದಾಡುತ್ತಿದ್ದಾರೆ. 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ